Friday, May 2, 2025

ತರಂಗ ಕಿವುಡು ಮಕ್ಕಳ ಶಾಲೆಗೆ ಶೇ.೧೦೦ ಫಲಿತಾಂಶ

ಭದ್ರಾವತಿ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆ 
    ಭದ್ರಾವತಿ : ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಳ್ಳುವ ಮೂಲಕ ಗಮನ ಸೆಳೆದಿದೆ. 
    ಈ ಬಾರಿ ಪರೀಕ್ಷೆ ಎದುರಿಸಿದ ಶಾಲೆಯ ೮ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ೬ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗು ೨ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಲಭಿಸಿದೆ. 
    ವಿಕಲಚೇತನ ವಿದ್ಯಾರ್ಥಿಗಳ ಸಾಧನೆಗೆ ಟ್ರಸ್ಟ್ ಆಡಳಿತ ಮಂಡಳಿ, ಲಯನ್ಸ್ ಕ್ಲಬ್ ಶುಗರ್ ಟೌನ್-ಲಯನ್ಸ್ ಎಜುಕೇಷನ್ ಟ್ರಸ್ಟ್ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು, ಶಿಕ್ಷಕ ವೃಂದ ಹಾಗು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆಂದು ಟ್ರಸ್ಟ್ ಕಾರ್ಯದರ್ಶಿ ಎಸ್.ಎನ್ ಸುಭಾಷ್ ತಿಳಿಸಿದ್ದಾರೆ.  

No comments:

Post a Comment