Thursday, May 1, 2025

ಚಿರತೆ ದಾಳಿಗೆ ಕರು ಬಲಿ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಈ ಭಾಗದ ಕಲ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕರು ಮೇಲೆ ದಾಳಿ ನಡೆಸಿ ಬಲಿ ತೆಗೆದುಕೊಂಡಿರುವ ಘಟನೆ ನಡೆದಿದೆ. 
    ಭದ್ರಾವತಿ : ತಾಲೂಕಿನ ಕೂಡ್ಲಿಗೆರೆ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಈ ಭಾಗದ ಕಲ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕರು ಮೇಲೆ ದಾಳಿ ನಡೆಸಿ ಬಲಿ ತೆಗೆದುಕೊಂಡಿರುವ ಘಟನೆ ನಡೆದಿದೆ. 
    ಕಳೆದ ಎರಡು ದಿನಗಳ ಹಿಂದೆ ಎಪಿಎಂಸಿ ಮಾಜಿ ಸದಸ್ಯೆ ಸುಜಾತರವರ ಟಿವಿಎಸ್ ಫಾರಂ ತೋಟದ ಮನೆಯಲ್ಲಿ ಚಿರತೆ ಕಾಣಿಸಿಕೊಂಡು ಭಯದ ವಾತಾವರಣ ಉಂಟು ಮಾಡಿತ್ತು. ಅಲ್ಲದೆ ಮಂಗಳವಾರ ನಾಯಿ ಬಲಿ ತೆಗೆದುಕೊಂಡಿದ್ದ  ಚಿರತೆ ಇದೀಗ ಕರು ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ. ಇದರಿಂದ ಈ ಭಾಗದ ಗ್ರಾಮಸ್ಥರಲ್ಲಿ ಆತಂಕ ಮರೆ ಮಾಡಿದೆ. ಅರಣ್ಯ ಇಲಾಖೆ ತಕ್ಷಣ ಮುನ್ನಚ್ಚರಿಕೆವಹಿಸಿ ಚಿರತೆ ಸೆರೆ ಹಿಡಿಯಬೇಕೆಂಬುದು ಗ್ರಾಮಸ್ಥರ ಆಗ್ರಹವಾಗಿದೆ. 

No comments:

Post a Comment