ಭದ್ರಾವತಿ ನ್ಯೂಟೌನ್ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ತಾಯಂದಿರ ದಿನ ಕಾರ್ಯಕ್ರಮದಲ್ಲಿ ಪತ್ರಕರ್ತ ಸುಭಾಷ್ ರಾವ್ ಸಿಂಧ್ಯಾ ಹಾಗು ಸವಿತಾ ದಂಪತಿ ಪುತ್ರಿ ಎಸ್. ಹರ್ಷಿತಾ ಅವರ ಭರತನಾಟ್ಯ ಮನಸೂರೆಗೊಳಿಸಿತು. ವಿಶ್ವವಿದ್ಯಾಲಯದ ವತಿಯಿಂದ ಹರ್ಷಿತಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ : ತಾಯ್ತನಕ್ಕಿಂತ ತಾಯಿ ಹೃದಯ ಅತ್ಯಂತ ಮುಖ್ಯವಾಗಿದ್ದು, ಜಗತ್ತಿಗೆ ತಾಯಿ ಪ್ರೀತಿ ಹಂಚಿದ ಮದರ್ ತೆರೇಸಾ ಹಾಗೂ ಮರಗಳನ್ನೇ ಮಕ್ಕಳಂತೆ ಪ್ರೀತಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇಂತಹ ಸಾಲಿನಲ್ಲಿ ನಿಲ್ಲುತ್ತಾರೆ ಎಂದು ನಗರದ ನ್ಯೂಟೌನ್ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಮುಖ್ಯಸ್ಥೆ ಬಿ.ಕೆ ಮಾಲಕ್ಕ ಹೇಳಿದರು.
ಅವರು ಗುರುವಾರ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ತಾಯಂದಿರ ದಿನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಭಗವಂತನನ್ನು ಬರಿಗಣ್ಣಿನಿಂದ ನೋಡಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ತಾಯಿಯನ್ನು ಪ್ರತ್ಯಕ್ಷ ದೈವ ಎಂದು ಪೂಜಿಸಲಾಗುತ್ತದೆ. ಸಹಿಷ್ಣುತ ಗುಣವುಳ್ಳ ತಾಯಿಯನ್ನು ಪ್ರಕೃತಿಯಲ್ಲಿ ಭೂಮಿ ಸೇರಿದಂತೆ ವಿವಿಧ ರೀತಿಯಲ್ಲಿ ಪೂಜಿಸಿ ಆರಾಧಿಸಲಾಗುತ್ತದೆ ಎಂದು ಉದಾಹರಣೆ ಸಹಿತ ವಿವರಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಮಾತನಾಡಿ, ತಾಯಿಯನ್ನು ಮೊದಲ ಗುರು ಎಂದು ಪೂಜಿಸಲ್ಪಡುವ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿರುವ ಭಾರತ ದೇಶದಲ್ಲಿ ತಾಯಿಗೆ ಮಹತ್ವದ ಸ್ಥಾನ ನೀಡಲಾಗಿದೆ. ತಾಯಿಯ ಋಣ ತೀರಿಸಲು ಅಸಾಧ್ಯವಾಗಿದ್ದು, ಮಕ್ಕಳು ಹೆತ್ತವರನ್ನು ಕೊನೆಯ ಕಾಲದಲ್ಲಿ ನೋಡಿಕೊಳ್ಳುವುದು ಆದ್ಯ ಕರ್ತವ್ಯವಾಗಿದೆ ಎಂದರು.
ಹೇಮಶ್ರೀ ಪ್ರಾರ್ಥಿಸಿ, ಪುಷ್ಪಲತಾ, ದೇವರಾಜ್ ಕವನ ವಾಚಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಸುಭಾಷ್ ರಾವ್ ಸಿಂಧ್ಯಾ ಹಾಗು ಸವಿತಾ ದಂಪತಿ ಪುತ್ರಿ ಎಸ್. ಹರ್ಷಿತಾ ಅವರ ಭರತನಾಟ್ಯ ಮನಸೂರೆಗೊಳಿಸಿತು. ವಿಶ್ವವಿದ್ಯಾಲಯದ ವತಿಯಿಂದ ಹರ್ಷಿತಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
No comments:
Post a Comment