Saturday, May 31, 2025

ಪೌರ ಕಾರ್ಮಿಕರ ೨ನೇ ದಿನದ ಮುಷ್ಕರ : ವಿವಿಧ ಸಂಘ-ಸಂಸ್ಥೆಗಳ ಬೆಂಬಲ

ಭದ್ರಾವತಿ ನಗರಸಭೆಯ ಪೌರ ಕಾರ್ಮಿಕರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಕಚೇರಿ ಮುಂಭಾಗದಲ್ಲಿ ಆರಂಭಿಸಿರುವ ಮುಷ್ಕರಕ್ಕೆ ಅನೇಕ ಸಂಘ ಸಂಸ್ಥೆಗಳ ಮುಖಂಡರು ಬೆಂಬಲ ವ್ಯಕ್ತ ಪಡಿಸಿದರು.   
    ಭದ್ರಾವತಿ: ನಗರಸಭೆ ಪೌರ ಕಾರ್ಮಿಕರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಕಚೇರಿ ಮುಂಭಾಗದಲ್ಲಿ ಆರಂಭಿಸಿರುವ ಮುಷ್ಕರ ಶನಿವಾರ ೨ನೇ ದಿನಕ್ಕೆ ಕಾಲಿಟ್ಟಿದೆ. 
    ಶಿವಮೊಗ್ಗ ಮಹಾನಗರಪಾಲಿಕೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎನ್. ಗೋವಿಂದ, ದಲಿತ ಸಂಘರ್ಷ ಸಮಿತಿ  ಜಿಲ್ಲಾ ಸಂಚಾಲಕ ಚಿನ್ನಯ್ಯ, ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು, ಕಾಂಗ್ರೇಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಗಂಗಾಧರ, ನಗರಸಭೆ ಸದಸ್ಯ ಬಸವರಾಜ್ ಸೇರಿದಂತೆ ಇನ್ನಿತರರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಧರಣಿಯಲ್ಲಿ ಪಾಲ್ಗೊಂಡಿದ್ದರು. 
    ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಚೇತನ್‌ಕುಮಾರ್, ಜಿಲ್ಲಾಧ್ಯಕ್ಷ ಹೇಮಂತಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಇನ್ನು ಮುಂತಾದ ಮುಂಖಂಡರು ಉಪಸ್ಥಿರಿದ್ದರು.

No comments:

Post a Comment