ಭದ್ರಾವತಿ ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಸ್ವಾಮಿಯ ೧೦ನೇ ವರ್ಷದ ಮಹಾರಥೋತ್ಸವ ಅಂಗವಾಗಿ ಮಂಗಳವಾರ ಓಕುಳಿ ಉತ್ಸವ ವಿಜೃಂಭಣೆಯಿಂದ ಜರಗಿತು.
ಭದ್ರಾವತಿ : ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಸ್ವಾಮಿಯ ೧೦ನೇ ವರ್ಷದ ಮಹಾರಥೋತ್ಸವ ಅಂಗವಾಗಿ ಮಂಗಳವಾರ ಓಕುಳಿ ಉತ್ಸವ ವಿಜೃಂಭಣೆಯಿಂದ ಜರಗಿತು.
ಬೆಳಿಗ್ಗೆ ಯಾತ್ರಾ ಹೋಮ, ವಾರುಣ ಹೋಮ, ಅವಭೃತ ಸ್ನಾನ, ಸಂಜೆ ಧ್ವಜಾವರೋಹಣ, ರಂಗಪೂಜೆ, ದೀಪೋತ್ಸವ, ರಾಷ್ಟ್ರಾಶೀರ್ವಾದ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಮಧ್ಯಾಹ್ನ ೧೨ ಗಂಟೆಗೆ ದೇವಸ್ಥಾನದಿಂದ ಭಕ್ತರು ಹಾಗು ಭಜನಾ ತಂಡಗಳೊಂದಿಗೆ ಸ್ವಾಮಿಯನ್ನು ಓಕುಳಿ ಉತ್ಸವಕ್ಕೆ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾ ನದಿಗೆ ಕರೆದೊಯ್ಯಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ಪವನ್ ಕುಮಾರ್ ಉಡುಪ, ಚಂದ್ರಶೇಖರ್ ಉಡುಪ, ರಮಾನಂದ ಭಟ್, ಸೂರಜ್ ಭಟ್, ಸುಬ್ರಮಣ್ಯ ಭಟ್, ಅಜಯ್ ಭಟ್, ಗುರುರಾಜ ಭಟ್ ಸೇರಿದಂತೆ ಇನ್ನಿತರ ಪುರೋಹಿತರು ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು.
ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಜಿ. ರಮಾಕಾಂತ್, ವಿಜಯ್, ಚಂದನ್, ಇಶಾನ್, ನಂದನ್, ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕೆ. ನರಸಿಂಹಮೂರ್ತಿ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment