ಅರುಣ್ ಕುಮಾರ್
ಭದ್ರಾವತಿ : ಕ್ರಿಕೆಟ್ ಆಟದಲ್ಲಿ ಉಂಟಾದ ಜಗಳದ ಹಿನ್ನಲೆಯಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿನ ಆಧಾರದ ಮೇರೆಗೆ ಓರ್ವನನ್ನು ಬಂಧಿಸಲು ತೆರಳಿದ್ದ ಪೊಲೀಸರು ಆತ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಮಂಗಳವಾರ ನಡೆದಿದೆ.
ಕ್ರಿಕೆಟ್ ಆಟದಲ್ಲಿ ಉಂಟಾದ ಜಗಳದ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಅರುಣ್ ಎಂಬ ಯುವಕನನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಸಹೋದರ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಸಂಜಯ್, ಸಚಿನ್ ಮತ್ತು ಅರುಣ್ ಕುಮಾರ್ ಸೇರಿದಂತೆ ೪ಕ್ಕೂ ಹೆಚ್ಚು ಜನರ ವಿರುದ್ಧ ದೂರು ದಾಖಲಿಸಿದ್ದಾರೆ.
ಈ ದೂರಿನಲ್ಲಿ ಅರುಣ್ ಕುಮಾರ್(೧೯) ಅಲಿಯಾಸ್ ಕೊಕ್ಕು ೩ನೇ ಆರೋಪಿಯಾಗಿದ್ದು, ಈ ಹಿನ್ನಲೆಯಲ್ಲಿ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಠಾಣೆಯ ಉಪ ನಿರೀಕ್ಷಕ ಕೃಷ್ಣಕುಮಾರ್ ಮಾನೆ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಆರೋಪಿ ಅರುಣ್‌ಕುಮಾರ್‌ನನ್ನು ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲದೆ ಈತನಿಂದ ಹಲ್ಲೆಗೊಳಗಾಗಿರುವ ಪೊಲೀಸ್ ಸಿಬ್ಬಂದಿಗೂ ಸಹ ಚಿಕಿತ್ಸೆ ನೀಡಲಾಗಿದೆ. ಪೊಲೀಸ್ ಠಾಣೆಯಲ್ಲಿ ಅರುಣ್‌ಕುಮಾರ್ ವಿರುದ್ಧ ಒಟ್ಟು ೫ ಪ್ರಕರಣಗಳು ದಾಖಲಾಗಿವೆ.
No comments:
Post a Comment