ಎಂ. ಮುಕುಂದನ್
ಭದ್ರಾವತಿ: ನಗರದ ನ್ಯೂಕಾಲೋನಿ ನಿವಾಸಿ ಎಂ. ಮುಕುಂದನ್ ಅವರನ್ನು ಜಯಕರ್ನಾಟಕ ಸಂಘಟನೆ ಜಿಲ್ಲಾ ಸಮಿತಿಗೆ ೨ನೇ ಬಾರಿಗೆ ಕಾರ್ಯಾಧ್ಯಕ್ಷರಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
`ಕಟ್ಟೋಣ ನಾವು ಹೊಸ ನಾಡೊಂದನ್ನು' ಎಂಬ ಶೀರ್ಷಿಕೆಗೆ ಬದ್ಧರಾಗಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ನಾಡಿನ ನೆಲ-ಜಲ, ಪರಿಸರ ಸಾಮಾಜಿಕ ಕಳಕಳಿಯೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ಸಂರಕ್ಷಣೆಯ ಸಮಾಜಮುಖಿ ಕೆಲಸ-ಕಾರ್ಯಗಳನ್ನು ನಿರ್ವಹಿಸಲು ತಮ್ಮನ್ನು ನೇಮಕಗೊಳಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಿ.ಎ ಸುರೇಶ್‌ಶೆಟ್ಟಿ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಮುಕುಂದನ್‌ರವರ ನೇಮಕಕ್ಕೆ ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಸ ವ್ಯಕ್ತಪಡಿಸಿದ್ದು, ಜಯಕರ್ನಾಟಕ ಸಂಘಟನೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸಲಿ ಎಂದು ಆಶಿಸಿದ್ದಾರೆ.
No comments:
Post a Comment