ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಭದ್ರಾವತಿ ತಾಲೂಕು ಸಮಿತಿ ಹಾಗು ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್‌ರವರ ೪೬ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಕಛೇರಿಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ : ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿ ಹಾಗು ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್‌ರವರ ೪೬ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಕಛೇರಿಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್. ರವಿಕುಮಾರ್, ಮುಖಂಡರಾದ ಕುಮಾರ್(ಮೇಸ್ಟ್ರು), ನಾಗೇಶ್, ರೂಪ ನಾಗರಾಜ್ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ರಾಜಕೀಯ ಪಕ್ಷಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಎಸ್. ಮಣಿಶೇಖರ್‌ರವರ ಕಛೇರಿಗೆ ತೆರಳಿ ಸನ್ಮಾನಿಸಿ ಅಭಿನಂದಿಸುವ ಮೂಲಕ ಹುಟ್ಟುಹಬ್ಬದ ಸಂಭ್ರಮ ಹಂಚಿಕೊಂಡರು.
No comments:
Post a Comment