ನಾಡಪ್ರಭು ಶ್ರೀ ಕೆಂಪೇಗೌಡ
ಭದ್ರಾವತಿ : ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಜೂ.೨೭ರ ಶುಕ್ರವಾರ ಅಪ್ಪರ್‌ಹುತ್ತಾ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಸಂಜೆ ೫ ಗಂಟೆಗೆ ಆಯೋಜಿಸಲಾಗಿದೆ.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಲಿದ್ದು, ಶಿವಮೊಗ್ಗ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿಯವರು ಉಪಸ್ಥಿತರಿವರು. ಸಂಘದ ಅಧ್ಯಕ್ಷ ಎಸ್. ಆನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಗೌರವಾಧ್ಯಕ್ಷೆ ಶಾರದಾ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ನ್ಯಾಯವಾದಿ ಶ್ರೀಪಾಲ ಉಪನ್ಯಾಸ ನೀಡಲಿದ್ದು, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಧರ್ಮೇಶ್ ಸಿರಿಬೈಲು, ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೆಗ್ಡೆ, ತಾಲೂಕು ಒಕ್ಕಲಿಗರ ಸಂಘದ ಮಹಾ ಪೋಷಕ ಎಲ್.ಜಿ ನಾಗರಾಜ್, ಎಚ್.ಎಸ್ ಶಶಾಂಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment