ಭದ್ರಾವತಿ ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಈ ಬಾರಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಸಮಾಜದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಭದ್ರಾವತಿ : ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಈ ಬಾರಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಸಮಾಜದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದ ಶ್ರೀ ಬನಶಂಕರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಮಾಜದ ಸರ್ವ ಸದಸ್ಯರ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಭವಿಷ್ಯದಲ್ಲಿ ಮತ್ತಷ್ಟು ಸಾಧನೆ ಮಾಡುವಂತೆ ಪ್ರೇರೇಪಿಸಲಾಯಿತು.
ಸಮಾಜದ ಗೌರವ ಸಲಹೆಗಾರರಾದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ಪ್ರತಿಭಾ ಪುರಸ್ಕಾರದ ಉದ್ದೇಶ ಹಾಗು ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸಮಾಜದ ಅಧ್ಯಕ್ಷರಾದ ಶ್ರೀಮತಿ ನಾಗರತ್ನ ವಾಗೀಶ್ ಕೋಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಪ್ರಧಾನ ಕಾರ್ಯದರ್ಶಿ ಕುಸುಮಾ ತೀರ್ಥಯ್ಯ ವಾರ್ಷಿಕ ವರದಿ ಹಾಗು ಖಜಾಂಚಿಯಾದ ಪರಿಮಳ ರೋಹಿತ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.
ಸಮಾಜದ ಗೌರವಾಧ್ಯಕ್ಷೆ ಆರ್ ಎಸ್ ಶೋಭಾ, ಉಪಾಧ್ಯಕ್ಷೆ ನಾಗರತ್ನ ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕವಿತಾ ಅಶೋಕ್ ಮತ್ತು ಮಮತ ಪ್ರಕಾಶ್ ಪ್ರಾರ್ಥಿಸಿದರು. ನಗರಸಭೆ ಸದಸ್ಯೆ ಅನುಪಮಾ ಚನ್ನೇಶ್ ಕಾರ್ಯಕ್ರಮ ನಿರೂಪಿಸಿ, ಶಶಿಕಲಾ ಉದಯಕುಮಾರ್ ವಂದಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ