Thursday, June 19, 2025

ಶಾಮ್ ಪ್ರಸಾದ್ ಮುಖರ್ಜಿ ಭಾವಚಿತ್ರ ಬಿಡುಗಡೆ

ಭದ್ರಾವತಿ ಭಾರತೀಯ ಜನತಾ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಬುಧವಾರ ಪಕ್ಷದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ್ಯಾಂತರ ಜನರಿಗೆ ಸ್ಪೂರ್ತಿದಾಯಕರಾಗಿ ಪಕ್ಷದ ಕಾರ್ಯಕರ್ತರಿಗೆ ದಾರಿದೀಪವಾಗಿರುವ ಶಾಮ್ ಪ್ರಸಾದ್ ಮುಖರ್ಜಿಯವರ ಭಾವಚಿತ್ರ  ಬಿಡುಗಡೆಗೊಳಿಸಲಾಯಿತು. 
    ಭದ್ರಾವತಿ : ಭಾರತೀಯ ಜನತಾ ಪಕ್ಷದ  ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಬುಧವಾರ ಪಕ್ಷದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ್ಯಾಂತರ ಜನರಿಗೆ ಸ್ಪೂರ್ತಿದಾಯಕರಾಗಿ ಪಕ್ಷದ ಕಾರ್ಯಕರ್ತರಿಗೆ ದಾರಿದೀಪವಾಗಿರುವ ಶಾಮ್ ಪ್ರಸಾದ್ ಮುಖರ್ಜಿಯವರ ಭಾವಚಿತ್ರ  ಬಿಡುಗಡೆಗೊಳಿಸಲಾಯಿತು. 
    ಪಕ್ಷದ ಜಿಲ್ಲಾ ಉಪಾಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಜಿ. ಆನಂದಕುಮಾರ್ ಭಾವಚಿತ್ರ ಬಿಡುಗಡೆಗೊಳಿಸಿ ಮಾತನಾಡಿ, ಜೂ.೨೩ ಶಾಮ್ ಪ್ರಸಾದ್‌ರವರ ಬಲಿದಾನದ ದಿನವಾಗಿದೆ. ಅಂದು ಪ್ರತಿ ಬೂತ್‌ನಲ್ಲೂ ಅವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಮರ್ಪಿಸಬೇಕು. ಅವರ ಆದರ್ಶತನ ಯುವ ಸಮುದಾಯಕ್ಕೆ ತಿಳಿಸಿಕೊಡಬೇಕೆಂದರು.
    ಪಕ್ಷದ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಮುಖಂಡರಾದ ಮಂಗೋಟೆ ರುದ್ರೇಶ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ, ಕಾರ್ಯಕ್ರಮದ ಸಂಚಾಲಕರಾದ ರಘುರಾವ್, ತೀರ್ಥಪ್ಪ, ಸುಬ್ರಮಣ್ಯ ( ಸುಬ್ಬಣ್ಣ ), ಹಿರಿಯ ಕಾರ್ಯಕರ್ತರಾದ  ನಂಜಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕಾರ್ಯಕ್ರಮದ ಅಂತಿಮ ಘಟ್ಟದ ಬೈಠಕ್‌ನಲ್ಲಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

No comments:

Post a Comment