ಭದ್ರಾವತಿಯಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಶುಕ್ರವಾರ ನಗರದ ಲೋಯರ್ ಹುತ್ತಾ ಬಸ್ ನಿಲ್ದಾಣದಿಂದ ಕೆಂಪೇಗೌಡರ ಹಾಗು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರ ಮತ್ತು ವಿವಿಧ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.
ಭದ್ರಾವತಿ : ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಶುಕ್ರವಾರ ನಗರದ ಲೋಯರ್ ಹುತ್ತಾ ಬಸ್ ನಿಲ್ದಾಣದಿಂದ ಕೆಂಪೇಗೌಡರ ಹಾಗು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರ ಮತ್ತು ವಿವಿಧ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಗೆ ಸಂಘದ ಗೌರವಾಧ್ಯಕ್ಷೆ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಶಿವಮೊಗ್ಗ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಿದ್ದರು.
ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ಇನ್ನಿತರ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದ್ದವು. ಲೋಯರ್ ಹುತ್ತಾದಿಂದ ಆರಂಭಗೊಂಡ ಮೆರವಣಿಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತದವರೆಗೆ ಸಾಗಿತು.
ಮೆರವಣಿಗೆಯಲ್ಲಿ ಸಂಘದ ಅಧ್ಯಕ್ಷ ಎಸ್. ಆನಂದ್ ಹಾಗು ಪದಾಧಿಕಾರಿಗಳು, ಒಕ್ಕಲಿಗ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮೆರವಣಿಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment