ಭದ್ರಾವತಿಯಲ್ಲಿ ಕೈಗಾರಿಕೆಗಳ ನಿರ್ಮಾತೃ, ನಗರದ ಅನ್ನದಾತ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಜನ್ಮದಿನ ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಲಾಯಿತು.
ಭದ್ರಾವತಿ: ಕೈಗಾರಿಕೆಗಳ ನಿರ್ಮಾತೃ, ನಗರದ ಅನ್ನದಾತ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಜನ್ಮದಿನ ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಲಾಯಿತು.
ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ರಾಜ್ಯಕ್ಕೆ, ನಾಡಿಗೆ ಅವರ ಕೊಡುಗೆಗಳನ್ನು ಸ್ಮರಿಸಲಾಯಿತು. ತಹಸೀಲ್ದಾರ್ ಗ್ರೇಡ್-೨ ಮಂಜಾನಾಯ್ಕರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ರಾಜ್ ಅರಸ್, ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ರವಿನಾಯ್ಕ, ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಕುಮಾರ್, ಖಜಾಂಚಿ ಶಂಕರ್, ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
No comments:
Post a Comment