ಫೈಲ್ವಾನ್ ಕೆಂಚಪ್ಪ
ಭದ್ರಾವತಿ : ಹಳೇನಗರದ ಜಟ್‌ಪಟ್ ನಗರದ ನಿವಾಸಿ, ಕಂಚಿ ಗರಡಿ ಮನೆ ಹಿರಿಯ ಕುಸ್ತಿಪಟು, ಫೈಲ್ವಾನ್ ಕೆಂಚಪ್ಪ(೮೭) ಭಾನುವಾರ ನಿಧನ ಹೊಂದಿದರು.
ಇಬ್ಬರು ಪತ್ನಿಯರು, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಇವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಕೆಂಚಪ್ಪ ನಗರದ ಪ್ರಸಿದ್ದ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದು, ಇವರಿಂದ ಹಲವಾರು ಯುವಕರು ಕುಸ್ತಿ ತರಬೇತಿ ಪಡೆದು ಗುರುತಿಸಿಕೊಂಡಿದ್ದಾರೆ. ಕೆಂಚಪ್ಪ ಶಾಸಕ ಬಿ.ಕೆ ಸಂಗಮೇಶ್ವರ್ ಆಪ್ತರಲ್ಲಿ ಒಬ್ಬರಾಗಿದ್ದು, ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಇವರ ಸಹೋದರರಾದ ಬಿ.ಕೆ ಮೋಹನ್, ಬಿ.ಕೆ ಶಿವಕುಮಾರ್, ಯುವ ಮುಖಂಡ ಬಿ.ಎಸ್ ಗಣೇಶ್, ಸ್ಥಳೀಯ ಫೈಲ್ವಾನ್‌ಗಳು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ