Saturday, June 7, 2025

ವಿಶ್ವ ಪರಿಸರ ದಿನ, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ

ವಿಶಿಷ್ಟ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ 

ಭದ್ರಾವತಿ ನಗರದಲ್ಲಿ ಕೆಲವು ವರ್ಷಗಳಿಂದ ವಿಭಿನ್ನ  ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ವತಿಯಿಂದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸ್ವಯಂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈರವರ ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ : ನಗರದಲ್ಲಿ ಕೆಲವು ವರ್ಷಗಳಿಂದ ವಿಭಿನ್ನ  ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ವತಿಯಿಂದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸ್ವಯಂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈರವರ ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಕಾಗದನಗರ ಪಶ್ಚಿಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಪೆನ್ಸಿಲ್, ಪೆನ್ ಸೇರಿದಂತೆ ಇನ್ನಿತರ ಲೇಖನ ಸಾಮಗ್ರಿಗಳನ್ನು ವಿತರಿಸುವ ಜೊತೆಗೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅಲ್ಲದೆ ವಿಶ್ವ ಪರಿಸರ ದಿನದ ಅಂಗವಾಗಿ ಸುಮಾರು ೧೦ ಸಸಿಗಳನ್ನು ಶಾಲಾ ಆವರಣದಲ್ಲಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. 
    ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಂಪನ್ಮೂಲ ವ್ಯಕ್ತಿಳಾದ ದಯಾನಂದ್ ಮತ್ತು ಸಿ. ಚನ್ನಪ್ಪ, ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತಾ, ಸಹಾಯಕ ಉಪ ನಿರೀಕ್ಷಕ ಕೃಷ್ಣಮೂರ್ತಿ, ಸಂಚಾರಿ ಪೊಲೀಸ್ ಠಾಣೆಯ ಹಸಿರು ಯೋಧ ಹಾಲೇಶಪ್ಪ, ಹೋಂ ಆಫ್ ಹೋಂ ಜನಸ್ನೇಹಿ ಆಶ್ರಮದ ರಾಜುನಾಯ್ಕ ಕನ್ನಡಿಗ, ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ಸಂಸ್ಥಾಪಕ ಪ್ರಶಾಂತ್, ಯುವ ಮುಖಂಡರಾದ ವಿಜಯ್, ತೀರ್ಥೇಶ್, ಶರತ್, ರಂಗಸ್ವಾಮಿ, ಎಂ.ಡಿ ಸಲ್ಮಾನ್, ಅಮ್ಜದ್, ಶಶಿಯೋಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment