ಭದ್ರಾವತಿ : ತಾಲೂಕು ಒಕ್ಕಲಿಗರ ಸಂಘ, ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತ್ಯೋತ್ಸವ ಅಂಗವಾಗಿ ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ, ನೇತ್ರದಾನ ನೊಂದಣಿ ಹಾಗು ಮಸೂರ ಅಳವಡಿಕೆ ಶಿಬಿರ ಜೂ.೨೫ರಂದು ಹಮ್ಮಿಕೊಳ್ಳಲಾಗಿದೆ.
ಅಪ್ಪರ್ ಹುತ್ತಾ ತಾಲೂಕು ಒಕ್ಕಲಿಗರ ಸಂಘದಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮೊ: ೭೨೫೯೪೫೮೪೧೯ ಅಥವಾ ತಾಲೂಕು ಒಕ್ಕಲಿಗರ ಸಂಘ ಪ್ರಧಾನ ಕಾರ್ಯದರ್ಶಿ ಮೊ: ೯೯೧೬೨೮೦೬೦೭ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment