ಭದ್ರಾವತಿ ತಾಲೂಕಿನ ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಗ್ರಾಮದ ಬೀದಿಗಳಲ್ಲಿ ಅಲಂಕೃತ ತೇರಿನ ಮೆರವಣಿಗೆ ನಡೆಯಿತು.
ಭದ್ರಾವತಿ : ತಾಲೂಕಿನ ಕಾರೇಹಳ್ಳಿ ಸಂತ ಅಂತೋಣಿಯವರ ಪುಣ್ಯಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಗ್ರಾಮದ ಬೀದಿಗಳಲ್ಲಿ ಅಲಂಕೃತ ತೇರಿನ ಮೆರವಣಿಗೆ ನಡೆಯಿತು.
ಶಿವಮೊಗ್ಗ ಧರ್ಮಕ್ಷೇತ್ರದ ಯುವಜನ ನಿರ್ದೇಶಕರಾದ ಫಾದರ್ ಫ್ರಾಂಕ್ಲಿನ್ ಡಿಸೋಜಾರವರಿಂದ ಪೂಜಾ ವಿಧಿ ವಿಧಾನಗಳು ನೆರವೇರಿದವು. ಹಳೇನಗರ, ನ್ಯೂಟೌನ್, ಕಾಗದನಗರ, ಮಾವಿನಕೆರೆ ಧರ್ಮ ಕೇಂದ್ರಗಳಿಂದ ಭಕ್ತರು ಆಗಮಿಸಿದ್ದರು.
ಧರ್ಮಕೇಂದ್ರದ ಗುರುಗಳಾದ ಫಾದರ್ ಸಂತೋಷ್ ಅಲ್ಮೇಡ, ಫಾದರ್ ಅನಿಲ್ ರಿಚರ್ಡ್, ಫಾದರ್ ಪಿಯೂಸ್, ಸೈಂಟ್ ಡೊಮಿನಿಕ್ ಧರ್ಮ ಭಗಿನಿಯರು ಉಪಸ್ಥಿತರಿದ್ದರು. ಜೂ.೧೩ರ ಶುಕ್ರವಾರ ಸಂತ ಅಂತೋಣಿಯವರು ಮೃತಪಟ್ಟ ದಿನವಾಗಿದ್ದು, ಅವರ ಸ್ಮರಣೆಗಾಗಿ ವಾರ್ಷಿಕ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಶಿವಮೊಗ್ಗ ಧರ್ಮ ಕ್ಷೇತ್ರದ ಧರ್ಮಾದ್ಯಕ್ಷರಾದ ಫ್ರಾನ್ಸಿಸ್ ಸೆರಾವೋರವರಿಂದ ಭಕ್ತಿಭಾವದ ವಿಶೇಷ ಪೂಜಾ ವಿಧಿ-ವಿಧಾನಗಳು, ಪ್ರಾರ್ಥನೆಗಳು, ಪ್ರಭೋದನೆಗಳು, ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ.
No comments:
Post a Comment