ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ಶ್ರೀಗಂಧ ಮರ ಹಾಗೂ ಇತರೆ ಜಾತಿಯ ಮರಗಳನ್ನು ಕಡಿತಲೆ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
ಭದ್ರಾವತಿ: ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ಶ್ರೀಗಂಧ ಮರ ಹಾಗೂ ಇತರೆ ಜಾತಿಯ ಮರಗಳನ್ನು ಕಡಿತಲೆ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
ಎರಡು ಶ್ರೀಗಂಧ ಮರ ಹಾಗು ಇತರೆ ಜಾತಿಯ ಮರಗಳನ್ನು ಕಡಿತಲೆ ಮಾಡಲಾಗಿದ್ದು, ಈ ಘಟನೆಗೆ ಸಂಬಂಧಿಸಿದ ಸೂಕ್ತ ಸಾಕ್ಷಿಗಳು ಇವೆ. ಈ ಹಿನ್ನಲೆಯಲ್ಲಿ ಕಾಲೇಜು ಆಡಳಿತ ಮಂಡಳಿಯ ಎಸ್ಟೇಟ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಾಮಾಣಿಕವಾಗಿ ತನಿಖೆ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಲಾಗಿದೆ.
ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ ತೀರ್ಥೇಶ್, ಕರವೇ ಮುಖಂಡರಾದ ಮೊಹಮ್ಮದ್ ಸಲ್ಮಾನ್, ಅಮ್ಜದ್, ಮಂಜುನಾಥಗೌಡ ಮತ್ತು ಪ್ರಶಾಂತ್ ಉಪಸ್ಥಿತರಿದ್ದರು.
No comments:
Post a Comment