ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳಿಂದ ರಾಜ್ಯದಲ್ಲಿ ಬಡಕುಟುಂಬಗಳಿಗೆ ತೊಂದರೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಅಗತ್ಯ ಕೈಗೊಳ್ಳುವಂತೆ ಭದ್ರಾವತಿ ಜನ್ನಾಪುರ, ಫಿಲ್ಟರ್ ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಗೃಹ ಸಚಿವರಿಗೆ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮಂಗಳವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಭದ್ರಾವತಿ : ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳಿಂದ ರಾಜ್ಯದಲ್ಲಿ ಬಡಕುಟುಂಬಗಳಿಗೆ ತೊಂದರೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಅಗತ್ಯ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಗೃಹ ಸಚಿವರಿಗೆ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮಂಗಳವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳು ನಾಯಿ ಕೊಡೆಗಳಂತೆ ಹುಟ್ಟಿಕೊಂಡಿವೆ. ಈ ಕಂಪನಿಗಳಿಂದ ಸಾಲ ಪಡೆದ ಬಡ ಗ್ರಾಹಕರು ಸಂಪೂರ್ಣವಾಗಿ ಸಾಲ ಮರು ಪಾವತಿ ಮಾಡಿದರೂ ಸಹ ಗ್ರಾಹಕರ ಖಾತೆಗಳಿಂದ ಗೊತ್ತಿಲ್ಲದಂತೆ ಹಣ ಕಡಿತಗೊಳ್ಳುತ್ತಿದೆ. ಇದರಿಂದಾಗಿ ಬಡಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ.
ಈ ಹಿನ್ನಲೆಯಲ್ಲಿ ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡು ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳಿಂದ ಸಾಲ ಪಡೆಯದಂತೆ ಜಾಗೃತಿ ಮೂಡಿಸಬೇಕೆಂದು ಶಶಿಕುಮಾರ್ ಗೌಡ ಮನವಿಯಲ್ಲಿ ಆಗ್ರಹಿಸಿದ್ದಾರೆ.
No comments:
Post a Comment