ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ತಾಲೂಕು ಪಂಚಾಯಿತಿ, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಹಾಗು ಕೂಡ್ಲಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿವಿಧ ಸಂಘ-ಸಂಸ್ಥೆಗಳಿಂದ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮೆಗ್ಗಾನ್ ಬೋಧನಾ ಮತ್ತು ಆಸ್ಪತ್ರೆ, ರಕ್ತನಿಧಿ ಕೇಂದ್ರ ಸಹಯೋಗದೊಂದಿಗೆ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಸರ್ಕಾರಿ ಅಧಿಕಾರಿಗಳು, ಮಹಿಳಾ ಸಂಘ-ಸಂಸ್ಥೆಗಳ ಸದಸ್ಯೆಯರು, ಗ್ರಾಮಸ್ಥರು ಸೇರಿದಂತೆ ಸುಮಾರು ೫೪ ಮಂದಿ ರಕ್ತದಾನ ಮಾಡಿದರು. ರಕ್ತದಾನಿಗಳಾದ ಹಸಿರು ಯೋಧ, ಹೆಡ್‌ಕಾನ್‌ಸ್ಟೇಬಲ್ ಹಾಲೇಶಪ್ಪ, ಯುವ ಮುಖಂಡರಾದ ಎಸ್. ಮಹಾದೇವ ಕೂಡ್ಲಿಗೆರೆ, ಪ್ರವೀಣ್‌ನಾಯ್ಕ, ಮೂರ್ತಿ ಮತ್ತು ವೆಂಕಟೇಶ್ ಸೇರಿದಂತೆ ೫ ಮಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಲ್ಲದೆ ಶಿಬಿರದಲ್ಲಿ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್‌ರವರ ಹುಟ್ಟುಹಬ್ಬ ಆಚರಿಸಿ ಸಿಹಿ ಹಂಚಲಾಯಿತು.
ಜಮೀನ್ದಾರ್ ಕೂಡ್ಲಿಗೆರೆ ಹಾಲೇಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ವರ್ಗದವರು ಹಾಗು ಗ್ರಾಮದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ೫ ಮಂದಿ ರಕ್ತದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
No comments:
Post a Comment