ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಶ್ವಕರ್ಮ ಸಮಾಜ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಅತಿಹೆಚ್ಚು ಅಂಕಪಡೆದ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ಕೀರ್ತನಾ ಅವರನ್ನು ಶ್ರೀ ಸತಶ್ರೀ ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ: ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಶ್ವಕರ್ಮ ಸಮಾಜ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಅತಿಹೆಚ್ಚು ಅಂಕಪಡೆದ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ಕೀರ್ತನಾ ಅವರನ್ನು ಶ್ರೀ ಸತಶ್ರೀ ಶಂಕರಾತ್ಮನಂದ ಸರಸ್ವತಿ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೧೧ ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಈಕೆ ಕನ್ನಡಪ್ರಭ ಪತ್ರಿಕಾವಿತರಕ ಕೃಷ್ಣಮೂರ್ತಿ ಮತ್ತು ಸ್ವಣಾಂಬ ದಂಪತಿ ಪುತ್ರಿಯಾಗಿದ್ದಾರೆ.
ವೇದಿಕೆಯಲ್ಲಿ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ವಿಶ್ವಕರ್ಮ ಸಮಾಜ ತಾಲೂಕು ಅಧ್ಯಕ್ಷ ಬಿ.ಕೆ ಶ್ರೀನಾಥ್ ಹಾಗು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment