ಭದ್ರಾವತಿ : ನಗರದ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಜೂ.೨೨ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಶಿವಮೊಗ್ಗ ನಂಜಪ್ಪ ಲೈಫ್‌ಕೇರ್ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ನುರಿತ ವೈದ್ಯರುಗಳಿಂದ ಉಚಿತ ಹೃದ್ರೋಗ, ಮಧುಮೇಹ ಮತ್ತು ರಕ್ತದೊತ್ತಡ ಕಾಯಿಲೆಗಳಿಗೆ ಸಂಬಂಧಿಸಿದ ತಪಾಸಣೆ ನಡೆಯಲಿದ್ದು, ಅಲ್ಲದೆ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಆರ್. ಶಾಂತಲರವರು ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಸಮಾಲೋಚನೆ ನಡೆಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment