ವಿಕಸಿತ ಭಾರತ ಸಂಕಲ್ಪ ಸಮಾವೇಶದಲ್ಲಿ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್
ಬಿಜೆಪಿ ಪಕ್ಷದ ಭದ್ರಾವತಿ ಗ್ರಾಮಾಂತರ ಮಂಡಲ ವತಿಯಿಂದ ಹಿರಿಯೂರು ಮಹಾಶಕ್ತಿ ಕೇಂದ್ರದ ಬಾರಂದೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಸಿತ ಭಾರತ ಸಂಕಲ್ಪ ಸಮಾವೇಶ ಪಕ್ಷದ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಇರುವುದು ಕೇವಲ ನಾಲ್ಕು ಜಾತಿ. ಮೊದಲು ಬಡವ, ಎರಡನೇಯದು ರೈತ, ಮೂರನೇಯದು ಮಹಿಳೆ ಮತ್ತು ನಾಲ್ಕನೇಯದು ಯುವಕರು. ಇವರ ಸರ್ವತೋಮುಖ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಹೇಳಿದರು.
ಅವರು ಗುರುವಾರ ಪಕ್ಷದ ಗ್ರಾಮಾಂತರ ಮಂಡಲ ವತಿಯಿಂದ ಹಿರಿಯೂರು ಮಹಾಶಕ್ತಿ ಕೇಂದ್ರದ ಬಾರಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ೧೧ ವರ್ಷದ ಯಶಸ್ವಿ ಆಡಳಿತದ ಅವಧಿಯಲ್ಲಿ ಅವರು ಕೈಗೊಂಡ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲಾ ಸೌಲಭ್ಯಗಳು ದೊರಕುವಂತಾಗಬೇಕು. ಭಾರತ ಜಗತ್ತಿನಲ್ಲಿಯೇ ರ್ವಶಕ್ತ ರಾಷ್ಟ್ರವಾಗಬೇಕು ಎಂಬುದಾಗಿ ಸಂಕಲ್ಪ ಮಾಡಿದ್ದಾರೆ. ಅವರೊಂದಿಗೆ ನಾವೆಲ್ಲ ಕೈಜೋಡಿಸೋಣ ಎಂದು ಕರೆ ನೀಡಿದರು.
ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸನ್ನ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಯುವ ಮೋರ್ಚಾ ಕಾರ್ಯದರ್ಶಿ ಭರತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ ಹರಿಕೃಷ್ಣ, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿಲ್ಲಾ ಖಜಾಂಚಿ ಸತೀಶ್, ಮಂಡಲ ಪ್ರಧಾನ ಕಾರ್ಯದರ್ಶಿ ಮೊಸರಳ್ಳಿ ಅಣ್ಣಪ್ಪ, ಶಾಂತಣ್ಣ, ತೀರ್ಥಪ್ಪ, ಹನುಮಂತ ನಾಯ್ಕ, ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಕಾರ್ಯಕರ್ತರು, ಉಪಸ್ಥಿತರಿದ್ದರು..
No comments:
Post a Comment