Friday, June 6, 2025

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಂದ ಉಕ್ಕು ಪ್ರಾಧಿಕಾರದ ಅಧ್ಯಕ್ಷರು, ಕಾರ್ಯದರ್ಶಿಗೆ ಮನವಿ

 ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್, ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ತಾಂತ್ರಿಕ ನಿರ್ದೇಶಕರಾದ ಎಂ.ಆರ್ ಗುಪ್ತಾ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘದಿಂದ ಕಾರ್ಖಾನೆ ಅಭಿವೃದ್ಧಿಗೊಳಿಸುವಂತೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್, ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ತಾಂತ್ರಿಕ ನಿರ್ದೇಶಕರಾದ ಎಂ.ಆರ್ ಗುಪ್ತಾ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘದಿಂದ ಕಾರ್ಖಾನೆ ಅಭಿವೃದ್ಧಿಗೊಳಿಸುವಂತೆ ಮನವಿ ಸಲ್ಲಿಸಲಾಯಿತು. 
    ಕಳೆದ ಹಲವಾರು ವರ್ಷಗಳಿಂದ ಕಾರ್ಖಾನೆ ಸಂಕಷ್ಟದಿಂದ ಮುನ್ನಡೆಯುತ್ತಿದ್ದು, ಇದರಿಂದಾಗಿ ಗುತ್ತಿಗೆ ಕಾರ್ಮಿಕರಿಗೆ ತಿಂಗಳ ಪೂರ್ತಿ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಗುತ್ತಿಗೆ ಕಾರ್ಮಿಕರು ದಿನದಿಂದ ದಿನಕ್ಕೆ ಆತಂಕದಲ್ಲಿ ಬದುಕುವಂತಾಗಿದೆ. ತಕ್ಷಣ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಿ ಹಿತ ಕಾಪಾಡುವಂತೆ ಮನವಿಯಲ್ಲಿ ಕೋರಲಾಗಿದೆ. 
ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಅಧಿಕಾರಿಗಳು ಶೀಘ್ರದಲ್ಲಿಯೇ ಅಗತ್ಯವಿರುವ ಬಂಡವಾಳ ತೊಡಗಿಸಿ ಕಾರ್ಖಾನೆ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. 
    ಕೃತಜ್ಞತೆ ಸಲ್ಲಿಕೆ : 
    ಕಾರ್ಖಾನೆಗೆ ಅಧಿಕಾರಿಗಳು ಭೇಟಿ ನೀಡಲು ಕಾರಣಕರ್ತರಾಗಿರುವ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ, ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘ ಕೃತಜ್ಞತೆ ಸಲ್ಲಿಸಿದೆ. 
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. 

No comments:

Post a Comment