ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ಭದ್ರಾವತಿ ನಗರದ ತುಳುಕೂಟ ವತಿಯಿಂದ ನ್ಯೂಟೌನ್ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ತುಳು ಉತ್ಸವ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಉದ್ಘಾಟಿಸಿದರು.
ಭದ್ರಾವತಿ: ತುಳು ಭಾಷೆಗೆ ತನ್ನದೇ ಆದ ವಿಶಿಷ್ಟತೆ, ಪರಂಪರೆ ಇದೆ. ತುಳುನಾಡಿಗರು ತಮ್ಮ ಮಾತೃಭಾಷೆ ಮೇಲೆ ಅಭಿಮಾನ ಬೆಳೆಸಿಕೊಂಡು ತಮ್ಮ ಮಕ್ಕಳಿಗೆ ಭಾಷೆ ಕಲಿಸಿಕೊಡಬೇಕೆಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ನಗರದ ತುಳುಕೂಟ ವತಿಯಿಂದ ನ್ಯೂಟೌನ್ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ತುಳು ಉತ್ಸವ ಉದ್ಘಾಟಿಸಿ ಮಾತನಾಡಿದರು.
ತುಳು ಭಾಷೆಗೆ ಎಲ್ಲೆಡೆ ಹೆಚ್ಚಿನ ಮಾನ್ಯತೆ ಲಭಿಸುತ್ತಿದ್ದು, ಭಾಷೆ ಜೊತೆಗೆ ತುಳು ಸಂಸ್ಕೃತಿ, ಆಚಾರ-ವಿಚಾರಗಳು ಸಹ ನಾವೆಲ್ಲರೂ ರೂಢಿಸಿಕೊಂಡು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಾಗಿದೆ. ಇಲ್ಲಿನ ತುಳುಕೂಟ ವಿಶಿಷ್ಟ ಕಾರ್ಯ ಚಟುವಟಿಕೆಗಳೊಂದಿಗೆ ಮುನ್ನಡೆದುಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ತುಳುಕೂಟದ ಅಧ್ಯಕ್ಷ ಪಿ. ಸುಧಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ಡಾ. ವೈ. ಆನಂದ್, ಉಪಾಧ್ಯಕ್ಷ ನಾರಾಯಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡಾ. ಹರೀಶ್ ದೇಲಂತಬೆಟ್ಟು ಮತ್ತು ಕಾರ್ಯದರ್ಶಿ ಬಿ. ಸುಬ್ಬಣ್ಣ ರೈ, ಉದ್ಯಮಿ ಬಿ.ಕೆ ಜಗನ್ನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬಿ. ದಿವಾಕರ ಶೆಟ್ಟಿ ಸ್ವಾಗತಿಸಿದರು. ತುಳು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
No comments:
Post a Comment