ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಭದ್ರಾ ಜಲಾಶಯದ ಬಲದಂಡೆ ನಾಲೆ ಸೀಳಿ ನೀರು ಪೂರೈಸುವ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರಮುಖರು ಮಾತನಾಡಿದರು.
ಭದ್ರಾವತಿ : ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಭದ್ರಾ ಜಲಾಶಯದ ಬಲದಂಡೆ ನಾಲೆ ಸೀಳಿ ನೀರು ಪೂರೈಸುವ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ತಡೆದು ಪೊಲೀಸರು ವಶಕ್ಕೆ ಪಡೆದರು.
ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಮಾಜಿ ಶಾಸಕ ಮಾಯಕೊಂಡ ಬಸವರಾಜನಾಯ್ಕ ಸೇರಿದಂತೆ ದಾವಣಗೆರೆ ಜಿಲ್ಲಾ ರೈತ ಒಕ್ಕೂಟ ಹಾಗೂ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಪ್ರಮುಖರು, ರೈತರು ಸೇರಿದಂತೆ ಪ್ರತಿಭಟನಾನಿರತನ್ನು ಪೊಲೀಸರು ತಡೆದು ವಶಕ್ಕೆ ಪಡೆದರು.
ಜೂ.೨೮ರಂದು ದಾವಣಗೆರೆ ಬಂದ್:
ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾಮಗಾರಿ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ಉಗ್ರ ಹೋರಾಟ ನಡೆಸಲಾಗುವುದು. ಈ ನಡುವೆ ಜೂ.೨೫ರ ಬುಧವಾರ ಬೆಳಿಗ್ಗೆ ದಾವಣಗೆರೆ ಬಾಡಾ ಕ್ರಾಸ್‌ನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು. ಜೂ.೨೮ರ ಶನಿವಾರ ದಾವಣಗೆರೆ ನಗರ ಬಂದ್‌ಗೆ ಕರೆ ನೀಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
No comments:
Post a Comment