ಬುಧವಾರ, ಜುಲೈ 2, 2025

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಜನ್ಮ ದಿನ ಆಚರಣೆ

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಅಂಗವಾಗಿ ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿಯವರ ಜನ್ಮದಿನ ಆಚರಿಸಲಾಯಿತು.  
    ಭದ್ರಾವತಿ: ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಅಂಗವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿಯವರ ಜನ್ಮದಿನ ಆಚರಿಸಲಾಯಿತು. 
    ಡಾ. ಫ.ಗು ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಪ್ರಮುಖರಾದ ಗಂಗಾ ಕುಬ್ಸದ್, ಎಂಪಿಎಂ ನಿವೃತ್ತ ನೌಕರ ಬಸವರಾಜ್ ಮತ್ತು ವೈ.ಬಿ ನಂದಿನಿಯವರು ಹಳಕಟ್ಟಿಯವರು ವಚನ ಸಾಹತ್ಯಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿದರು. 
    ತಹಸೀಲ್ದಾರ್ ಪರುಸಪ್ಪ ಕುರುಬರ, ಉಪತಹಸೀಲ್ದಾರ್ ಮಂಜಾನಾಯ್ಕ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕತ್ತಲಗೆರೆ ತಿಮ್ಮಪ್ಪ, ಹಳೇನಗರದ ಮಾಲೀಕರ ಸಂಘದ ಅಧ್ಯಕ್ಷ ಬಸವರಾಜಯ್ಯ, ರಾಜಣ್ಣ, ಸುವರ್ಣಮ್ಮ ಹಿರೇಮಠ್, ಮಲ್ಲಿಕಾಂಬ, ಗೌರಮ್ಮ, ಸರ್ವೇಶ್ವರಿ, ಕಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಶರಣ ಸಾಹಿತ್ಯ ಪರಿಷತ್ ಮಹಿಳೆಯರು ಪ್ರಾರ್ಥಿಸಿದರು. ಹಿರಿಯ ಸಾಹಿತಿ ಜೆ.ಎನ್ ಬಸವರಾಜಪ್ಪ ಜಗಜ್ಯೋತಿ ಬಸವಣ್ಣನವರ ವಚನಗಳನ್ನು ವಾಚಿಸಿದರು.
 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ