ಭದ್ರಾವತಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ೧ರ ವ್ಯಾಪ್ತಿಯ ಅರಳಿಕೊಪ್ಪ ವಲಯದ ಗೋಣಿಬೀಡು ಕಾರ್ಯಕ್ಷೇತ್ರದ ವಿದ್ಯಾಶ್ರೀ ಜ್ಞಾನವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಯಶೋಧಮ್ಮ, ಮುರುಳಿಧರ ಶೆಟ್ಟಿ ಉದ್ಘಾಟಿಸಿದರು.
ಭದ್ರಾವತಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಮಹಿಳೆಯರು ಅಭಿವೃದ್ಧಿಗೊಳ್ಳಲು ಸಹಕಾರಿಯಾಗಿವೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಯಶೋಧಮ್ಮ ಹೇಳಿದರು. ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ೧ರ ವ್ಯಾಪ್ತಿಯ ಅರಳಿಕೊಪ್ಪ ವಲಯದ ಗೋಣಿಬೀಡು ಕಾರ್ಯಕ್ಷೇತ್ರದ ವಿದ್ಯಾಶ್ರೀ ಜ್ಞಾನವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯೋಜನೆಯ ಹಲವು ಕಾರ್ಯಕ್ರಮಗಳು ಗ್ರಾಮೀಣ ಭಾಗದ ಮಹಿಳೆಯರಿಗೆ ಪರಿಪೂರ್ಣವಾಗಿ ತಲುಪುತ್ತಿದ್ದು, ಬಹಳಷ್ಟು ಮಹಿಳೆಯರು ಇವುಗಳ ಸದ್ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸಿದ್ದಾರೆಂದರು.
ಜಿಲ್ಲಾ ಯೋಜನಾ ನಿರ್ದೇಶಕ ಮುರುಳಿಧರ ಶೆಟ್ಟಿ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮಗಳು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ರೂಪುಗೊಂಡ ಕಾರ್ಯಕ್ರಮಗಳಾಗಿವೆ. ಸಾಧನೆ ಸಾಧಕನ ಸ್ವತ್ತಾಗಿದ್ದು, ಪ್ರತಿಯೊಬ್ಬ ಮಹಿಳೆ ಯಶಸ್ಸಿನ ದಾರಿಯಲ್ಲಿ ಸಾಗುವಂತಾಗಲಿ ಎಂದರು.
ತಾಲೂಕು ಯೋಜನಾಧಿಕಾರಿ ಪ್ರಕಾಶ ವೈ ವಿದ್ಯಾಶ್ರೀ ಜ್ಞಾನ ವಿಕಾಸ ಕೇಂದ್ರ ಮಾದರಿ ಕೇಂದ್ರವಾಗಬೇಕೆಂದು ಶುಭ ಹಾರೈಸಿದರು. ಕೇಂದ್ರದ ಸದಸ್ಯರು ಅನಿಸಿಕೆಯನ್ನು ವ್ಯಕ್ತಪಡಿಸಿದರು. ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಸದಸ್ಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ನೇತ್ರಾವತಿ, ವಲಯ ಮೇಲ್ವಿಚಾರಕ ಮೋಹನ್, ಕೇಂದ್ರ ಸಂಯೋಜಕಿ ಕವಿತಾ ಉಪಸ್ಥಿತರಿದ್ದರು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ