ಭದ್ರಾವತಿ ನಗರದ ಲಯನ್ಸ್ ಕ್ಲಬ್ ಶುಗರ್‌ಟೌನ್ ವತಿಯಿಂದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಭಾನುವಾರ ಅಂತರಾಷ್ಟ್ರೀಯ ಚೆಸ್ ದಿನ ಆಚರಿಸಲಾಯಿತು.
ಭದ್ರಾವತಿ: ನಗರದ ಲಯನ್ಸ್ ಕ್ಲಬ್ ಶುಗರ್‌ಟೌನ್ ವತಿಯಿಂದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಭಾನುವಾರ ಅಂತರಾಷ್ಟ್ರೀಯ ಚೆಸ್ ದಿನ ಆಚರಿಸಲಾಯಿತು.
ಲಯನ್ ತಮ್ಮೆಗೌಡ ಚೆಸ್ ಆಟವಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಚೆಸ್ ಕಲಿಕೆಯು ಪೂರಕವಾಗುತ್ತದೆ. ಮಕ್ಕಳಲ್ಲಿ ಏಕಾಗ್ರತೆ, ತಾಳ್ಮೆ, ಚುರುಕುತನ, ನೆನಪಿನ ಶಕ್ತಿ ವೃದ್ಧಿಯಾಗುದಲ್ಲದೆ ಓದಿನ ಕಡೆ ಹೆಚ್ಚು ಆಸಕ್ತಿಯನ್ನು ಹೊಂದಲು ಅನುಕೂಲವಾಗುತ್ತದೆ ಎಂದರು.
ನಗರಸಭೆ ಸದಸ್ಯ ಚನ್ನಪ್ಪ, ಲಯನ್ಸ್ ಕ್ಲಬ್ ಶುಗರ್‌ಟೌನ್ ಪ್ರಮುಖರಾದ ಉಮೇಶ್, ಮಧು ಹಾಗು ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪರಿಣಿತ ಮತ್ತು ಪಾವನ ಪ್ರಾರ್ಥಿಸಿದರು. ಮಕ್ಕಳಿಗೆ ನೋಟ್ ಬುಕ್, ಪೆನ್ನು ಹಾಗು ಸಿಹಿಹಂಚಿಕೆ ಮಾಡಿ ಅಂತರಾಷ್ಟ್ರೀಯ ಚೆಸ್ ದಿನಾಚಾರಣೆ ಶುಭಾಶಯ ತಿಳಿಸಲಾಯಿತು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ