ಭದ್ರಾವತಿ: ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದ ನಗರಸಭೆ ವ್ಯಾಪ್ತಿಯ ಹನುಮಂತಪ್ಪ ಕಾಲೋನಿಯ ಅರ್ಚಕರೊಬ್ಬರು ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಬಿ.ಕೆ ಲಕ್ಷ್ಮೀಕಾಂತ(೫೦) ಮೃತಪಟ್ಟ ಅರ್ಚಕರಾಗಿದ್ದು, ಇವರು ಪ್ರತಿ ದಿನ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕೃಷ್ಣ ದೇವಸ್ಥಾನ ಹಾಗು ಹುಣಸೇಕಟ್ಟೆ ಜಂಕ್ಷನ್, ರಂಗನಾಥಪುರ ಬಿ.ಬಿ ಮೈನ್ಸ್ ಹತ್ತಿರದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಅರ್ಚಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಇವರು ಜು.೧೯ರಂದು ಮಧ್ಯಾಹ್ನ ೨.೩೦ರ ಸಮಯದಲ್ಲಿ ಪೂಜೆ ಮುಗಿಸಿಕೊಂಡು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದಾಗ ರಾಮಿನಕೊಪ್ಪ ಕ್ರಾಸ್ ಮತ್ತು ರಂಗನಾಥಪುರ ಮಧ್ಯೆ ಶಿವಮೊಗ್ಗ ಮಾರ್ಗದಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಲಕ್ಷ್ಮೀಕಾಂತ್‌ರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಲಕ್ಷ್ಮೀಕಾಂತ್‌ರವರ ಸಹೋದರ ರಂಗನಾಥ್‌ರವರು ಕಾರು ಚಾಲಕನ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ