ಡಿ.ಎಸ್ ರಾಜಪ್ಪ
ಭದ್ರಾವತಿ: ಹಳೇನಗರದ ಕೇಶವಪುರ ಬಡಾವಣೆ ನಿವಾಸಿ ಪಶು ಸಂಗೋಪನಾ ಇಲಾಖೆಯಲ್ಲಿ ಪಶು ವೈದ್ಯಕೀಯ ಪರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಡಿ.ಎಸ್ ರಾಜಪ್ಪ(೫೮) ಶುಕ್ರವಾರ ನಿಧನ ಹೊಂದಿದರು.
ಶಿಕ್ಷಕಿ, ಪತ್ನಿ ಜಿ.ಎಸ್ ಉಮಾ ಹಾಗು ಸಬ್‌ಇನ್ಸ್‌ಪೆಕ್ಟರ್, ಪುತ್ರ ಎಚ್.ಆರ್ ಅಭಿಷೇಕ್ ಮತ್ತು ಓರ್ವ ಪುತ್ರಿ ಇದ್ದಾರೆ. ಇವರ ಅಂತ್ಯಕ್ರಿಯೆ ಹೊಸದುರ್ಗಾ ತಾಲೂಕಿನ ಮತ್ತೋಡ್ ಬಳಿಯ ಹೊತ್ತರಗೊಂಡನಹಳ್ಳಿಯಲ್ಲಿ ನೆರವೇರಿತು. ಅನಾರೋಗ್ಯಕ್ಕೆ ಒಳಗಾಗಿದ್ದ ರಾಜಪ್ಪರವರು ಸುಮಾರು ೫-೬ ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ನೌಕರರ ಸಂಘದಲ್ಲಿ ಖಜಾಂಚಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು.
ಸಂತಾಪ: ಶಾಸಕ ಬಿ.ಕೆ ಸಂಗಮೇಶ್ವರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಸರ್ಕಾರದ ೫ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್.ಗಣೇಶ್, ಯುವ ಮುಖಂಡ ಬಿ.ಎಸ್ ಬಸವೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಮಾಜಿ ಅಧ್ಯಕ್ಷ ಎನ್. ಕೃಷ್ಣಪ್ಪ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್, ಆಡಳಿತಾಧಿಕಾರಿ ಡಾ.ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್, ಪಶು ಸಂಗೋಪನಾ ವೈದ್ಯಕೀಯ ಇಲಾಖೆಯ ನಿವೃತ್ತ ಪರೀಕ್ಷಕ ಎನ್.ಎಸ್ ರಮೇಶ್ ಮುಂತಾದವರು ಡಿ.ಎಸ್.ರಾಜಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ