ಬ್ಲಾಕ್ ಕಾಂಗ್ರೆಸ್‌ನಿಂದ ಅಭಿನಂದನಾ ಕಾರ್ಯಕ್ರಮ
ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಭದ್ರಾವತಿ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಯುವ ಮುಖಂಡ ಬಿ.ಎಸ್ ಗಣೇಶ್ ಅವರನ್ನು ಭಾನುವಾರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಅಭಿನಂದಿಸಲಾಯಿತು.
ಭದ್ರಾವತಿ : ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಯುವ ಮುಖಂಡ ಬಿ.ಎಸ್ ಗಣೇಶ್ ಅವರನ್ನು ಭಾನುವಾರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಅಭಿನಂದಿಸಲಾಯಿತು.
ಭಾನುವಾರ ಸಂಜೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಗಣೇಶ್‌ರವನ್ನು ಅಭಿನಂದಿಸಿ ಮಾತನಾಡಿದ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಅವರು, ಯುವ ಮುಖಂಡರಾದ ಗಣೇಶ್‌ರವರು ಕ್ಷೇತ್ರದ ಭವಿಷ್ಯದ ರಾಜಕಾರಣದ ಯುವ ನಾಯಕರಾಗಿದ್ದಾರೆ. ಇವರಿಗೆ ಭವಿಷ್ಯದಲ್ಲಿ ಇನ್ನೂ ಉತ್ತಮ ಅವಕಾಶಗಳು ಲಭಿಸುವ ಮೂಲಕ ಉನ್ನತ ಸ್ಥಾನಕ್ಕೇರುವಂತಾಗಲಿ ಎಂದು ಆಶಿಸಿದರು.
ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.
No comments:
Post a Comment