ಕರ್ನಾಟಕ ಸರ್ಕಾರದ ೫ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಭದ್ರಾವತಿ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಬಿ.ಎಸ್ ಗಣೇಶ್‌ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ವಿಶ್ವೇಶ್ವರಾಯ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ: ಕರ್ನಾಟಕ ಸರ್ಕಾರದ ೫ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಬಿ.ಎಸ್ ಗಣೇಶ್‌ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ವಿಶ್ವೇಶ್ವರಾಯ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪರವರ ನೇತೃತ್ವದಲ್ಲಿ ಗಣೇಶ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಂಘದ ಕಾರ್ಯಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್, ಖಚಾಂಚಿ ಪ್ರಶಾಂತ್, ಪ್ರಮುಖರಾದ ಟಿ. ಪೃಥ್ವಿರಾಜ್ ರಂಗನಾಥ್, ರಾಜಕುಮಾರ್, ರಮೇಶ್, ಪ್ರಕಾಶ್, ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ. ಮತ್ತು ಶ್ರೀಧರ್ ಗೌಡ, ರಾಜನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ