ದಿನೇಶ್
ಭದ್ರಾವತಿ : ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ತಾಲೂಕಿನ ಮತ್ತಿಘಟ್ಟ ಗ್ರಾಮದ ೩೪ ವರ್ಷ ವಯೋಮಾನದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಿನೇಶ್ ಮೃತಪಟ್ಟಿದ್ದು, ರಾತ್ರಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಇವರನ್ನು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ. ಇವರಿಗೆ ಮದುವೆಯಾಗಿದ್ದು, ಎರಡು ಚಿಕ್ಕ ಮಕ್ಕಳಿದ್ದಾರೆ.
ಇತ್ತೀಚೆಗೆ ಎಲ್ಲಾ ವಯೋಮಾನದವರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಎಲ್ಲೆಡೆ ಆತಂಕ ಎದುರಾಗಿದ್ದು, ಹೃದಯಾಘಾತಕ್ಕೆ ನಿಖರ ಕಾರಣಗಳು ತಿಳಿದು ಬರುತ್ತಿಲ್ಲ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ