ಭದ್ರಾವತಿ: ನಗರಸಭೆ ಸಾಮಾನ್ಯ ಸಭೆ ಜು.೧೦ರಂದು ಬೆಳಿಗ್ಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದ್ದು, ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಂಗಾರು ಮಳೆ ಆರಂಭದ ನಂತರ ನಡೆಯುತ್ತಿರುವ ಮೊದಲ ಸಾಮಾನ್ಯ ಸಭೆ ಇದಾಗಿದ್ದು, ವಾರ್ಡ್‌ಗಳಲ್ಲಿ ಸಾಕಷ್ಟು ಸಮಸ್ಯೆಗಳು ಕಂಡು ಬರುತ್ತಿವೆ. ಮಳೆಯಿಂದಾಗಿ ಕೆಲವು ರಸ್ತೆಗಳು ಈಗಾಗಲೇ ಹಾಳಾಗಿದ್ದು, ಗುಂಡಿಗಳು ಉಂಟಾಗಿವೆ. ಅಲ್ಲದೆ ಬಹುತೇಕ ವಾರ್ಡ್‌ಗಳಲ್ಲಿ ಚರಂಡಿಗಳಲ್ಲಿ ಸ್ವಚ್ಛತೆ ಇಲ್ಲವಾಗಿದೆ. ಒಂದೆಡೆ ಸೊಳ್ಳೆ ಹಾವಳಿ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಈ ಬಾರಿ ಸಭೆ ಹೆಚ್ಚಿನ ಗಮನ ಸೆಳೆಯುತ್ತಿದೆ.
ಸದಸ್ಯರು ತಪ್ಪದೇ ಸಭೆಗೆ ಹಾಜರಾಗುವ ಮೂಲಕ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ.
No comments:
Post a Comment