ಭದ್ರಾವತಿ ಜೆಪಿಎಸ್ ಕಾಲೋನಿಯಲ್ಲಿರುವ ಕಾರ್ಯನಿರ್ವಾಹಕ ಇಂಜಿನಿಯರ್ ರವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು
ಭದ್ರಾವತಿ: ತಾಲೂಕಿನಲ್ಲಿ ಮೆಸ್ಕಾಂ ವತಿಯಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಯಶಸ್ವಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಮನವಿ ಮಾಡಿದರು.
ಅವರು ಸೋಮವಾರ ಜೆಪಿಎಸ್ ಕಾಲೋನಿಯಲ್ಲಿರುವ ಕಾರ್ಯನಿರ್ವಾಹಕ ಇಂಜಿನಿಯರ್ ರವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಮುಖವಾಗಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಹೆಚ್ಚಿನ ಗ್ರಾಹಕರಿದ್ದು, ಉಚಿತ ವಿದ್ಯುತ್ ಯೋಜನೆಯನ್ನು ಬಹುತೇಕ ಗ್ರಾಹಕರು ಸದ್ಬಳಕೆ ಮಾಡಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇದೆ ರೀತಿ ಮುಂದುವರೆಯಬೇಕೆಂದರು .
ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಬಳ್ಳಾಪುರ ಮಾತನಾಡಿ, ಭದ್ರಾವತಿ ಮತ್ತು ಹೊಳೆಹೊನ್ನೂರು ಒಟ್ಟು ತಾಲೂಕಿನಲ್ಲಿ ಸುಮಾರು 1,06,000 ಗ್ರಾಹಕರಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯಡಿ 86,000 ಗ್ರಾಹಕರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಪೈಕಿ ಸುಮಾರು 9000 ಗ್ರಾಹಕರು 200 ಯೂನಿಟ್ ಗಿಂತ ಹೆಚ್ಚು ಬಳಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಎಂ. ಬಸಂತಪ್ಪ ಅಧ್ಯಕ್ಷತೆ ವಹಿಸಿದ್ದರು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಉಪಾಧ್ಯಕ್ಷ ಮಣಿ ಎಎನ್ಎಸ್, ಸದಸ್ಯರಾದ ಚನ್ನಪ್ಪ, ಲತಾ ಚಂದ್ರಶೇಖರ್, ಮಾಜಿ ಸದಸ್ಯೆ ಎಂ ಎಸ್ ಸುಧಾಮಣಿ, ಬಿ.ಕೆ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್. ಎಲ್ ಷಡಾಕ್ಷರಿ, ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ್ , ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ಸದಸ್ಯರಾದ ವಿಜಯಲಕ್ಷ್ಮಿ ಸುರೇಶ್ ವರ್ಮಾ, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಳಾದ ಅಬ್ದುಲ್ ಮುನಾಫ್ ಮತ್ತು ಬೀರಪ್ಪ, ಮೆಸ್ಕಾಂ ವಿದ್ಯುತ್ ಗುತ್ತಿಗೆದಾರರು ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ಹಾಗೂ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಡಿ28-ಬಿಡಿವಿಟಿ
Ananthakumara, Reporter, Kannadaprabha, NDK/31A, Near, Sri Satyasayi Baba school, Newtown, Bhadravathi:-577301(Tq) Shimoga(Dis) Mob: 9738801478 : 9482007466
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ