ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ಭದ್ರಾವತಿ ಯುವ ಘಟಕದ ಅಧ್ಯಕ್ಷರಾಗಿ ತಾಲೂಕು ಛಾಯಗ್ರಾಹಕರ ಸಂಘದ ಮಾಜಿ ಅಧ್ಯಕ್ಷ ಎಚ್. ರಾಮಕೃಷ್ಣ ಆಯ್ಕೆಯಾಗಿದ್ದಾರೆ.
ಭದ್ರಾವತಿ: ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ಯುವ ಘಟಕದ ಅಧ್ಯಕ್ಷರಾಗಿ ತಾಲೂಕು ಛಾಯಗ್ರಾಹಕರ ಸಂಘದ ಮಾಜಿ ಅಧ್ಯಕ್ಷ ಎಚ್. ರಾಮಕೃಷ್ಣ ಆಯ್ಕೆಯಾಗಿದ್ದಾರೆ.
ಹಳೇನಗರದ ಸವಿತಾ ಸಮಾಜದ ಸಭಾಂಗಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕ ಹಾಗೂ ಯುವ ಘಟಕದ ವತಿಯಿಂದ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಉಪಾಧ್ಯಕ್ಷರಾಗಿ ಕುಶಾಲ್ ಗೌಡ, ಸಂಘಟನಾ ಕಾರ್ಯದರ್ಶಿಯಾಗಿ ಕುಮಾರ್ ಹಾಗೂ ಸಂಚಲಕರಾಗಿ ಮಹಮದ್ ವಜೀರ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿರುವ ಎಂ. ಪರಮೇಶ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮುರುಳಿ, ತಾಲೂಕು ಘಟಕದ ಅಧ್ಯಕ್ಷ ಆನಂದ್ ಮತ್ತು ಜಿಲ್ಲಾ ಛಾಯಗಾಹಕ ಸಂಘದ ಅಧ್ಯಕ್ಷ ಕೆ.ಟಿ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಛಾಯಾಗ್ರಾಹಕ ಸಂಜೀವ್ ರಾವ್ ಸಿಂಧಿಯಾ ನಿರೂಪಿಸಿದರು.
No comments:
Post a Comment