ಭದ್ರಾವತಿಯಲ್ಲಿ ಆಗಸ್ಟ್‌ನಲ್ಲಿ ನಡೆಯಲಿರುವ `ಕರ್ನಾಟಕ ಸ್ಟಾರ್ ಸಿಂಗರ್ ಸೀಸನ್-೨' ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮದ ಲಾಂಛನ ಮತ್ತು ಕರಪತ್ರ ಸರ್ಕಾರದ ೫ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಬಿಡುಗಡೆಗೊಳಿಸಿದರು.
ಭದ್ರಾವತಿ: ಯುವ ಗಾಯಕರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ(ಎಸ್‌ಡಿಸಿಎಎ)ದ ವತಿಯಿಂದ ಆಯೋಜಿಸಿಕೊಂಡು ಬರುತ್ತಿರುವ ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆ `ಕರ್ನಾಟಕ ಸ್ಟಾರ್ ಸಿಂಗರ್' ಕಾರ್ಯಕ್ರಮ ಈ ಬಾರಿ ಸಹ ಆಯೋಜಿಸಲಾಗಿದೆ.
ಸಂಘದ ಅಧ್ಯಕ್ಷ, ಗಾಯಕ ಬಿ.ಎ ಮಂಜುನಾಥ್‌ರವರ ನೇತೃತ್ವದಲ್ಲಿ ಆಗಸ್ಟ್ ತಿಂಗಳಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ರೂಪಿಸಲಾಗಿರುವ `ಕರ್ನಾಟಕ ಸ್ಟಾರ್ ಸಿಂಗರ್ ಸೀಸನ್-೨' ರಾಜ್ಯಮಟ್ಟದ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮದ ಲಾಂಛನ ಮತ್ತು ಕರಪತ್ರ ಸರ್ಕಾರದ ೫ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಬಿಡುಗಡೆಗೊಳಿಸಿದರು.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಲಾಂಛನ ಮತ್ತು ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್, ಪದಾಧಿಕಾರಿಗಳಾದ ವೈ.ಕೆ ಹನುಮಂತಯ್ಯ, ಚರಣ್ ಕವಾಡ್, ಪ್ರಶಾಂತ್, ಚಿದಾನಂದ್, ರಾಮು, ಬಾಬು, ದೇವರಾಜ್, ಮುರುಗೇಶ್ ಮತ್ತು ಸ್ಟಾರ್ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ