ಭದ್ರಾವತಿ : ಶ್ರೀ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಅಂಗವಾಗಿ ನ್ಯೂಟೌನ್ ಆದಿಚುಂಚನಗಿರಿ ವಿದ್ಯಾಸಂಸ್ಥೆ(ಎಸ್‌ಎವಿ)ಯಲ್ಲಿ ಜು.೨೨ರ ಮಂಗಳವಾರ ಬೆಳಗ್ಗೆ ೧೦.೩೦ಕ್ಕೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ, ಆಶುಭಾಷಣ ಮತ್ತು ಚಿತ್ರ ಕಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿಗಳು ಮತ್ತು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಶ್ರೀ ನಾಡಪ್ರಭು ಕೆಂಪೇಗೌಡರಿಗೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು ಆಯೋಜಿಸಿಲಾಗಿದೆ. ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳ ತಲಾ ಇಬ್ಬರು ವಿದ್ಯಾರ್ಥಿಗಳಂತೆ ಭಾಗವಹಿಸಬಹುದಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ