ಅನಧಿಕೃತ ಏಜೆಂಟರು, ಬ್ರೋಕರ್‌ಗಳು, ಸೈಬರ್ ಸೆಂಟರ್ ನಡೆಸುವವರು ಉಪ ನೋಂದಾಣಾಧಿಕಾರಿಗಳ ಕಚೇರಿಗೆ ಹಾಜರಾಗಿ ಪತ್ರಗಳನ್ನು ನೋಂದಾಯಿಸುತ್ತಿದ್ದು, ಇದರಿಂದ ಅಧಿಕೃತ ಪತ್ರ ಬರಹಗಾರರ ವೃತ್ತಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಭದ್ರಾವತಿ ತಾಲೂಕು ಅಧಿಕೃತ ಪರವಾನಗಿ ಪಡೆದ ಪತ್ರ ಬರಹಗಾರರ ಸಂಘ ಉಪ ನೋಂದಾಣಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿತು.
ಭದ್ರಾವತಿ: ಅನಧಿಕೃತ ಏಜೆಂಟರು, ಬ್ರೋಕರ್‌ಗಳು, ಸೈಬರ್ ಸೆಂಟರ್ ನಡೆಸುವವರು ಉಪ ನೋಂದಾಣಾಧಿಕಾರಿಗಳ ಕಚೇರಿಗೆ ಹಾಜರಾಗಿ ಪತ್ರಗಳನ್ನು ನೋಂದಾಯಿಸುತ್ತಿದ್ದು, ಇದರಿಂದ ಅಧಿಕೃತ ಪತ್ರ ಬರಹಗಾರರ ವೃತ್ತಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಾಲೂಕು ಅಧಿಕೃತ ಪರವಾನಗಿ ಪಡೆದ ಪತ್ರ ಬರಹಗಾರರ ಸಂಘ ಉಪ ನೋಂದಾಣಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿತು.
ಇತ್ತೀಚೆಗೆ ಕಾವೇರಿ ೨.೦ ತಂತ್ರಾಂಶ ಜಾರಿಗೆ ಬಂದ ನಂತರ ಸಿಟಿಜನ್ ಲಾಗಿನ್ ಮುಖಾಂತರ ಅನಧಿಕೃತ ಏಜೆಂಟರು ದಸ್ತಾವೇಜು ತಯಾರಿಸುವ ಬಗ್ಗೆ ಯಾವುದೇ ತಿಳಿವಳಿಕೆ, ಮಾಹಿತಿ ಇಲ್ಲದೆ, ಪಕ್ಷಗಾರರ ದಾಖಲಾತಿಗಳನ್ನು ಪರಿಶೀಲಿಸದೆ ದಸ್ತಾವೇಜುಗಳನ್ನು ತಯಾರಿಸಿ ಕಾವೇರಿ ೨.೦ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ. ದಸ್ತಾವೇಜುಗಳನ್ನು ನೋಂದಾಯಿಸಿ ಕೊಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಈ ವೃತ್ತಿಯನ್ನೇ ನಂಬಿ ಪರವಾನಗಿ ಪಡೆದು ಜೀವನ ನಡೆಸುತ್ತಿರುವವರಿಗೆ ಅನ್ಯಾಯವಾಗುತ್ತಿದೆ ಎಂದು ದೂರಲಾಗಿದೆ.
ಈ ಕುರಿತು ಹಲವು ಬಾರಿ ಕಚೇರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಸಾರ್ವಜನಿಕರ ದಾಖಲೆಗಳನ್ನು ಪಡೆದು ನೋಂದಣಿಗೆ ಬರುವ ಅನಧಿಕೃತ ವ್ಯಕ್ತಿಗಳು ಕಚೇರಿಗೆ ಬರುವುದನ್ನು ತಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು. ತಕ್ಷಣ ಪತ್ರ ಬರಹಗಾರರ ಸಮಸ್ಯೆಗೆ ಸ್ಪಂದಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಂಘದ ತಾಲೂಕು ಅಧ್ಯಕ್ಷ ಮೂರ್ತಿ, ಉಪಾಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಎಂ. ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಸತ್ಯನಾರಾಯಣ, ಪ್ರಮುಖರಾದ ನಾಗೇಂದ್ರ, ಅಶ್ವಥ್, ಶ್ರೀಧರ್, ಚಂದ್ರಶೇಖರ್, ಎಂ.ಮರುಡಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ