ಅತ್ತಿಗುಂದ ಚಂದ್ರಶೇಖರಯ್ಯ
ಭದ್ರಾವತಿ : ತಾಲೂಕಿನ ಅರಳಿಹಳ್ಳಿ ಗ್ರಾಮದ ನಿವಾಸಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅತ್ತಿಗುಂದ ಚಂದ್ರಶೇಖರಯ್ಯ(೭೩) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು.
ಪತ್ನಿ, ಪುತ್ರಿ ಹಾಗು ಇಬ್ಬರು ಪುತ್ರರು ಇದ್ದಾರೆ. ಇವರ ಅಂತ್ಯಕ್ರಿಯೆ ಸಂಜೆ ಅರಳಿಹಳ್ಳಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ನೆರವೇರಿತು. ಚಂದ್ರಶೇಖರಯ್ಯರವರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಅಭಿಮಾನಿಯಾಗಿದ್ದು, ಅವರ ಮಾರ್ಗದರ್ಶನದಲ್ಲಿ ರಾಜಕೀಯ ಆರಂಭಿಸಿದ್ದರು. ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ ಒಂದೇ ಅವಧಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು. ಬಂಗಾರಪ್ಪನವರು ಸೇರ್ಪಡೆಗೊಂಡ ಪಕ್ಷಗಳಿಗೆ ಇವರು ಸಹ ಸೇರ್ಪಡೆಗೊಳ್ಳುತ್ತಿದ್ದರು. ಬಂಗಾರಪ್ಪನವರ ನಿಧನದ ನಂತರ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.
ಇವರ ನಿಧನಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment