ಭದ್ರಾವತಿ : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಿವಂಗತ ಡಾ. ಎಚ್.ಎಸ್ ವೆಂಕಟೇಶ್‌ಮೂರ್ತಿಯವರ ಸ್ಮರಣಾರ್ಥ ಜು.೧೮ರ ಶುಕ್ರವಾರ ಸಂಜೆ ೪.೩೦ಕ್ಕೆ ಹಳೇನಗರ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ `ಭಾವಗೀತೆಗಳ ಗೀತಗಾಯನ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಜನ್ನಾಪುರ ಸಂಗೀತ ಶಿಕ್ಷಕಿ ಗಾಯಿತ್ರಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ನಿವೃತ್ತ ಪ್ರಾಂಶುಪಾಲ ಡಾ. ಕೆ. ನಿತ್ಯಾನಂದ ಉಪನ್ಯಾಸ ನೀಡಲಿದ್ದಾರೆ. ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಎಂ.ಆರ್ ರೇವಣಪ್ಪ ಉಪಸ್ಥಿತರಿರುವರು.
ಸುಮತಿ ಕಾರಂತ್, ಕಮಲಾಕುಮಾರಿ, ಆರ್.ಜಿ ಭಾರ್ಗವಿ, ಎನ್.ಎಂ ಸುನಂದ, ಅನುಪಮ ಚನ್ನೇಶ್, ಎಚ್.ಸಿ ಸುನಂದ, ವಾಣಿಶ್ರೀ ನಾಗರಾಜ್, ಶ್ಯಾಮಲ, ಸುಚಿತ್ರ, ದಿವಾಕರ್, ಡಿ.ಆರ್ ಹರೀಶ್ ಮತ್ತು ರುದ್ರೇಶ್ ಸೇರಿದಂತೆ ಇನ್ನಿತರರು ಗಾಯನ ಪ್ರಸ್ತುತಪಡಿಸಲಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ