ಕೆ.ಬಿ ಶಿವುಕುಮಾರ್
ಭದ್ರಾವತಿ: ಹಳೇನಗರದ ಭೂತನಗುಡಿ ನಿವಾಸಿ ಕೆ.ಬಿ ಶಿವುಕುಮಾರ್‌ರವರನ್ನು ಕರ್ನಾಟಕ ರಾಜ್ಯ ಮಾದಿಗ ಸಮಾಜದ ರಾಜ್ಯ ಸಂಘಟನಾ ಸಹಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ಆದೇಶ ಹೊರಡಿಸಿದ್ದಾರೆ.
ಜಗದ್ಗುರು ಬಸವಣ್ಣ ಮತ್ತು ವಿಶ್ವಜ್ಞಾನಿ ಡಾ. ಬಿ.ಆರ್ ಅಂಬೇಡ್ಕರ್‌ರವರ ತತ್ವಾದರ್ಶಗಳಿಗೆ ಹೊಂದಿಕೊಂಡು ಸಂಘಟನೆಯ ರೀತಿ-ನೀತಿ ನಿಯಮಗಳನ್ನು ಪಾಲನೆ ಮಾಡುವುದರ ಮೂಲಕ ಸಮಾಜದ ಅಭಿವೃದ್ಧಿಗೆ ಮತ್ತು ಸಂಘಟನೆಯ ಬಲವರ್ಧನೆಗೆ ತೊಡಗಿಸಿಕೊಂಡು ತಮ್ಮ ಸ್ಥಾನಕ್ಕೆ ಧಕ್ಕೆ ಬಾರದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ