ಭದ್ರಾವತಿ ಕನ್ನಡ ಭವನಕ್ಕಾಗಿ ನಗರಸಭೆಯ ಸದಸ್ಯರ ಒಂದು ತಿಂಗಳ ಗೌರವ ಧನ ನೀಡುವಂತೆ ಕಟ್ಟಡ ಸಮಿತಿ ಅಧ್ಯಕ್ಷೆ ಡಾ: ವಿಜಯಾ ದೇವಿ ಮತ್ತಿತರರು ನಗರಸಭಾ ಸದಸ್ಯ ಬಿ.ಕೆ.ಮೋಹನ್ ಮತ್ತು ಪೌರಾಯುಕ್ತ ಪ್ರಕಾಶ್ ಎಂ.ಚೆನ್ನಪ್ಪ ನವರ್ ಅವರಿಗೆ ಮನವಿ ಸಲ್ಲಿಸಿದರು.
ಭದ್ರಾವತಿ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಕನ್ನಡ ಸಾಹಿತ್ಯ ಭವನಕ್ಕೆ ನಗರಸಭೆ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ನೀಡುವಂತೆ ಗುರುವಾರ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿದ ನಂತರ ಮಾತನಾಡಿದ ಡಾ. ವಿಜಯದೇವಿ, ಸುಮಾರು ೩೦ ವರ್ಷಗಳ ಹಿಂದೆ ಅಂದಿನ ಪುರಸಭೆ ವತಿಯಿಂದ ಸಿದ್ದಾಪುರ ಎನ್‌ಟಿಬಿ ಬಡಾವಣೆಯಲ್ಲಿ ನೀಡಿರುವ ನಿವೇಶನದಲ್ಲಿ ಇದೀಗ ನೂತನ ಭವನ ನಿರ್ಮಾಣಗೊಳ್ಳುತ್ತಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಭವನ ನಿರ್ಮಾಣಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದು, ಸುಸಜ್ಜಿತವಾದ ಭವನ ನಿರ್ಮಿಸುವ ಗುರಿ ಹೊಂದಿದ್ದಾರೆ. ಈ ಹಿಂದೆ ಶಾಸಕರು ಸಭೆ ನಡೆಸಿ ನಗರಸಭೆ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ಭವನ ನಿರ್ಮಾಣಕ್ಕೆ ನೀಡುವಂತೆ ಮನವಿ ಮಾಡಿದ್ದರು. ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ನೀಡುವ ಮೂಲಕ ಕನ್ನಡ ಸೇವೆಗೆ ಕೈಜೋಡಿಸಬೇಕೆಂದರು.
ಹಿರಿಯ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ನುಡಿದಂತೆ ನಡೆಯುವ ಶಾಸಕರು ಹಾಗು ಕುಟುಂಬ ವರ್ಗದವರು ಕನ್ನಡ ಸೇವೆಗಾಗಿ ಸದಾ ಸಿದ್ದವಾಗಿದ್ದೇವೆ. ನಗರಸಭೆ ಎಲ್ಲಾ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ನೀಡುವ ವಿಶ್ವಾಸವಿದೆ ಎಂದರು.
ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಮತ್ತು ಬಿ.ಕೆ ಮೋಹನ್ ಮನವಿ ಸ್ವೀಕರಿಸಿದರು. ನಗರಸಭೆ ಸದಸ್ಯರಾದ ಶೃತಿ ವಸಂತ ಕುಮಾರ್, ಬಷೀರ್ ಆಹಮದ್, ಕಟ್ಟಡ ಸಮಿತಿ ಕಾರ್ಯದರ್ಶಿ ಎಸ್.ಎಂ.ಸುಧಾಮಣಿ ಕೃತಜ್ಞತೆ ಸಲ್ಲಿಸಿದರು. ಪರಿಷತ್ ಪ್ರಮುಖರಾದ ನಾಗೋಜಿರಾವ್, ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment