ಭದ್ರಾವತಿ ನಗರದ ಹೊಸಮನೆ ಭೋವಿ ಕಾಲೋನಿ, ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ 41ನೇ ವರ್ಷದ ಶ್ರೀ ವಿನಾಯಕ ಸ್ವಾಮಿ ಮಹೋತ್ಸವ ಈ ಬಾರಿ ಸಹ ವಿಜೃಂಭಣೆಯಿಂದ ನಡೆಯುತ್ತಿದ್ದು, ಕಾಗದ ನಗರದ 7ನೇ ವಾರ್ಡ್ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕರಾದ ರಮೇಶ್ ತರಳಿ ಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗುತ್ತಿವೆ.
ಭದ್ರಾವತಿ : ನಗರದ ಹೊಸಮನೆ ಭೋವಿ ಕಾಲೋನಿ, ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ 41ನೇ ವರ್ಷದ ಶ್ರೀ ವಿನಾಯಕ ಸ್ವಾಮಿ ಮಹೋತ್ಸವ ಈ ಬಾರಿ ಸಹ ವಿಜೃಂಭಣೆಯಿಂದ ನಡೆಯುತ್ತಿದ್ದು, ಆ.31ರಂದು ವಿಸರ್ಜನೆಗೊಳ್ಳಲಿದೆ.
ಹಳೆನಗರದ ಕುಂಬಾರ ಬೀದಿ ಕಲಾವಿದ ಬಸವರಾಜು ಈ ಬಾರಿ ವಿನಾಯಕ ಮೂರ್ತಿ ತಯಾರಿಸಿದ್ದು, ಭಕ್ತರ ಮನಸೂರೆಗೊಳ್ಳುತ್ತಿದೆ. ಭೋವಿ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿರುವ ಈ ಪ್ರದೇಶದಲ್ಲಿ ಭೋವಿ ಸಮಾಜದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಜಿ ಅವರ ದಿವ್ಯ ಸಾನಿಧ್ಯದಲ್ಲಿ ಸಮುದಾಯದವರು ಹಾಗು ವಿವಿಧ ಸಂಘಟನೆಗಳು ಸಂಘಟಿತರಾಗಿ ಶಾಂತಿ, ಸೌಹಾರ್ದಯುತವಾಗಿ ಶ್ರೀ ವಿನಾಯಕ ಚತುರ್ಥಿ ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. 5 ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ವಿನಾಯಕ ಮಹೋತ್ಸವದಲ್ಲಿ ಆರ್ಕೆಸ್ಟ್ರಾ ಮತ್ತು ಡ್ಯಾನ್ಸ್ ಈವೆಂಟ್ಸ್ ಕಾರ್ಯಕ್ರಮಗಳು ನಡೆಯಲಿದ್ದು, ಅಲ್ಲದೆ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಗಣಪತಿ ಹೋಮ, ಸಾಮೂಹಿಕ ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿದೆ.
ಕಾಗದ ನಗರದ 7ನೇ ವಾರ್ಡ್ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕರಾದ ರಮೇಶ್ ತರಳಿ ಮಠರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗುತ್ತಿವೆ.
ಆ.31ರಂದು ವಿವಿಧ ಕಲಾ ತಂಡಗಳೊಂದಿಗೆ ಬೆಳಗ್ಗೆ 10:30ಕ್ಕೆ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ನಡೆಯಲಿದ್ದು, ಉತ್ಸವ ಮೆರವಣಿಗೆ ಪ್ರತಿಷ್ಠಾಪನೆ ಸ್ಥಳದಿಂದ ಶಿವಾಜಿ ವೃತ್ತ, ಹೊಸ ಮನೆ ಮುಖ್ಯರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಮೂಲಕ ನಗರದ ಕೆಎಸ್ಆರ್ ಟಿಸಿ ಮುಖ್ಯ ಬಸ್ ನಿಲ್ದಾಣದವರೆಗೆ ಸಾಗಿ ಪುನಹ ಹಿಂದಿರುಗಿ ಮಹಾತ್ಮ ಗಾಂಧಿ ರಸ್ತೆಯಲ್ಲಿ ಸಾಗಿ ಸಂಜೆ 7:30ಕ್ಕೆ ನಗರಸಭೆ ಮುಂಭಾಗದ ಭದ್ರ ನದಿಯಲ್ಲಿ ವಿಸರ್ಜನೆಗೊಳ್ಳಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಶ್ರೀ ವಿನಾಯಕ ಸೇವಾ ಸಮಿತಿ ಕೋರಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ