ಪ್ರತಿಭಾ ಪುರಸ್ಕಾರ, ಹಿರಿಯ ಸಮಾಜವಾದಿ ಹೋರಾಟಗಾರರಿಗೆ ಸನ್ಮಾನ
ಭದ್ರಾವತಿ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ದಿವಂಗತ ಡಿ. ದೇವರಾಜ ಅರಸು ಜನ್ಮ ದಿನಾಚರಣೆ ಅದ್ದೂರಿಯಾಗಿ ಆಚರಿಸಲು ಪೂರ್ವಭಾವಿ ಸಭೆ ನಡೆಸಲಾಯಿತು.
ಭದ್ರಾವತಿ : ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆ.೨೦ರಂದು ಹಳೇನಗರದ ಬಲಿಜ ಸಮುದಾಯ ಭವನದಲ್ಲಿ ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜಅರಸುರವರ ಜನ್ಮದಿನಾಚರಣೆ ಅದ್ದೂರಿಯಾಗಿ ಆಚರಿಸಿಲು ತೀರ್ಮಾನಿಸಲಾಯಿತು.
ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲು ಹಾಗೂ ಹಿರಿಯ ಹೋರಾಟಗಾರರಾದ ಸಮಾಜವಾದಿ ಕಡಿದಾಳ ಶಾಮಣ್ಣ ಅಥವಾ ಕಾಗೋಡು ತಿಮ್ಮಪ್ಪ ಅವರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ತಾಲೂಕಿನ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಸಭೆ ನಿರ್ಣಯ ಕೈಗೊಂಡಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸಭೆ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಉಪಾಧ್ಯಕ್ಷ ಮಣಿ ಎಎನ್‌ಎಸ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಬಿ.ಕೆ ಮೋಹನ್, ಚನ್ನಪ್ಪ, ಗ್ರೇಡ್-೨ ತಹಸೀಲ್ದಾರ್ ಮಂಜಾನಾಯ್ಕ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೈಲಜಾ, ಪುರಸಭೆ ಮಾಜಿ ಉಪಾಧ್ಯಕ್ಷ ಟಿ. ವೆಂಕಟೇಶ್, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಈಶ್ವರಪ್ಪ, ವಿನೋದ್‌ಕುಮಾರ್, ತೀರ್ಥೇಶ್, ವೈ. ಶಶಿಕುಮಾರ್, ಶಿವುಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ