ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಲಾಗಿದ್ದ ೭೯ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವೈದ್ಯರು ಹಾಗು ಸಿಬ್ಬಂದಿಗಳನ್ನು ಮತ್ತು ದೇವಸ್ಥಾನದ ಅರ್ಚಕರನ್ನು ಹಾಗು ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಲಾಗಿದ್ದ ೭೯ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವೈದ್ಯರು ಹಾಗು ಸಿಬ್ಬಂದಿಗಳನ್ನು ಮತ್ತು ದೇವಸ್ಥಾನದ ಅರ್ಚಕರನ್ನು ಹಾಗು ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಾದ ಡಾ. ಪ್ರೀತಿ ಮತ್ತು ಡಾ. ಜಗದೀಶ್ ಅರಬಿಳಚಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಬಾಯಿ, ಸಿಬ್ಬಂದಿಗಳಾದ ಪ್ರೇಮಕುಮಾರಿ, ಕವಿತಾ, ಶ್ರೀಕಾಂತ್ ಮತ್ತು ಆಶಾ ಸೇರಿದಂತೆ ಇನ್ನಿತರರ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಅಲ್ಲದೆ ಹೊಸಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ಮಂಜಪ್ಪ, ಶೈಲಶ್ರೀ, ಸನ್ಯಾಸಿ ಕೋಡಮಗ್ಗಿ ಸರ್ಕಾರಿ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ರೇವಣ ಸಿದ್ದಪ್ಪ, ಹುತ್ತಾ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹರ್ಷ, ಇತ್ತೀಚಿಗೆ ಮನೋವಿಜ್ಞಾನದಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಎಸ್.ಜಿ ಮೇಘನಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹಲವಾರು ವರ್ಷಗಳಿಂದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಪವನ್ ಕುಮಾರ್ ಉಡುಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಬಾರಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಹಾಗು ಪ್ರತಿಭಾವಂತ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ೭೦ಕ್ಕೂ ಹೆಚ್ಚು ಮಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಬಿ.ಟಿ ನಾಗರಾಜ್, ಚನ್ನಪ್ಪ, ಲತಾ ಚಂದ್ರಶೇಖರ್, ಶೃತಿ ವಸಂತಕುಮಾರ್, ಅನುಸುಧಾ ಮೋಹನ್ ಪಳನಿ, ಬಸವರಾಜ ಬಿ. ಆನೇಕೊಪ್ಪ, ಜಾರ್ಜ್, ಶಶಿಕಲಾ ನಾರಾಯಣಪ್ಪ, ಕಾಂತರಾಜ್, ಬಿ.ಎಂ ಮಂಜುನಾಥ್ ಸೇರಿದಂತೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ನಗರ ಆಶ್ರಯ ಸಮಿತಿ ಅಧ್ಯಕ್ಷ ಜಿ.ಎಸ್ ಗೋಪಾಲ್, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಆರ್‌ಎಎಫ್ ಬೆಟಾಲಿಯನ್ ಕಮಾಂಡರ್ ಕಮಲೇಶ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ತಾಲೂಕು ವೈದ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಶಿವುಪಾಟೀಲ್, ವಿನೋದ್, ಶಿವಪ್ಪ, ರಾಜೇಂದ್ರ, ಸುಕನ್ಯ, ಮಹಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ