ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಚಲನಚಿತ್ರ ನಟ ಅಹಿಂಸಾ ಚೇತನ್ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ: ಈ ದೇಶದ ಜನರು ಅಂಬೇಡ್ಕರ್‌ರವರ ವಿಚಾರಧಾರೆಗಳನ್ನು ಪರಿಪೂರ್ಣವಾಗಿ ಅರ್ಥಮಾಡಿಕೊಳ್ಳುವವರೆಗೂ ದೇಶದಲ್ಲಿ ಪರಿವರ್ತನೆ ತರಲು ಸಾಧ್ಯವಿಲ್ಲ ಎಂದು ಚಲನಚಿತ್ರ ನಟ ಅಹಿಂಸಾ ಚೇತನ್ ಹೇಳಿದರು.
ಅವರು ನಗರದ ಮಿಲ್ಟ್ರಿಕ್ಯಾಂಪ್ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಡಾ. ಬಿ.ಆರ್ ಅಂಬೇಡ್ಕರ್‌ರವರು ದೇಶದ ಸಂವಿಧಾನ ರಚಿಸುವಾಗ ಬಲ ಮತ್ತು ಎಡ ಪಂಥಿಯರು ಹಾಗು ಮನುವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ನಡುವೆ ಕಾಂಗ್ರೆಸ್ ಪಕ್ಷ ಸಹ ಅಂಬೇಡ್ಕರ್‌ರವರಿಗೆ ಪೂರ್ಣಪ್ರಮಾಣದಲ್ಲಿ ಬೆಂಬಲ ನೀಡಲಿಲ್ಲ. ಈಗಿರುವಾಗ ನಾವು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಹೊಂದುವುದು ಸರಿಯಲ್ಲ. ಅಂಬೇಡ್ಕರ್‌ರವರ ವಿಚಾರಧಾರೆಗಳನ್ನು ಈ ದೇಶದ ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಆಗ ಮಾತ್ರ ಏನಾದರೂ ಪರಿವರ್ತನೆ ತರಲು ಸಾಧ್ಯ ಎಂದರು.
ಸಭೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಸುರೇಶ್, ಶಿವಬಸಪ್ಪ, ಸತ್ಯ ಭದ್ರಾವತಿ, ಚಿನ್ನಯ್ಯ, ಡಿ. ರಾಜು, ವಿ. ವಿನೋದ್, ಕೃಷ್ಣನಾಯ್ಕ, ಪುಟ್ಟರಾಜ್, ಆರ್. ಅರುಣ್, ಮಂಜುನಾಥ್, ಯು. ಮಹಾದೇವಪ್ಪ, ಶರವಣ, ಲೋಕೇಶ್, ಸುಕನ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ