ಅಗ್ನಿವೀರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ತಾಲೂಕಿನ ನಗರ ಹಾಗು ಗ್ರಾಮೀಣ ಪ್ರದೇಶದ ಯುವಕರಿಗೆ ಭಾರತೀಯ ಸೈನ್ಯಕ್ಕೆ ಸೇರ್ಪಡೆಗೊಳ್ಳಲು ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಉಚಿತ ತರಬೇತಿ ನೀಡಲಾಗುತ್ತಿದೆ.
ಭದ್ರಾವತಿ : ಅಗ್ನಿವೀರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ತಾಲೂಕಿನ ನಗರ ಹಾಗು ಗ್ರಾಮೀಣ ಪ್ರದೇಶದ ಯುವಕರಿಗೆ ಭಾರತೀಯ ಸೈನ್ಯಕ್ಕೆ ಸೇರ್ಪಡೆಗೊಳ್ಳಲು ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಉಚಿತ ತರಬೇತಿ ನೀಡಲಾಗುತ್ತಿದೆ.
ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆ.೪ರಿಂದ ತರಬೇತಿ ನೀಡಲಾಗುತ್ತಿದ್ದು, ಸಂಘದ ಅಧ್ಯಕ್ಷ ಸುಬೇದಾರ್ ಗುಲ್ಗುಲೆ, ಕಾರ್ಯದರ್ಶಿ ವೆಂಕಟಗಿರಿ, ಉಪಾಧ್ಯಕ್ಷ ಮಹೇಶ್, ತರಬೇತಿ ಶಿಬಿರದ ಶಿಕ್ಷಕರಾದ ಕಮಾಂಡೋ ಗಿರಿ, ಸುರೇಶ್, ಪ್ರಸಾದ್ ಮತ್ತು ರಮೇಶ್ ಸೇರಿದಂತೆ ಇನ್ನಿತರರ ಸಮ್ಮುಖದಲ್ಲಿ ಶಿಬಿರಕ್ಕೆ ಚಾಲನೆ ನೀಡಲಾಗಿದೆ.
ಪ್ರಸ್ತುತ ಶಿಬಿರದಲ್ಲಿ ೮ ರಿಂದ ೧೦ ಯುವಕರು ಪಾಲ್ಗೊಂಡಿದ್ದು, ಆಸಕ್ತರು ತರಬೇತಿ ಪಡೆಯಲು ಹಾಗು ಹೆಚ್ಚಿನ ಮಾಹಿತಿಗಾಗಿ ಸುಬೇದಾರ್ ಗುಲ್ಗುಲೆ, ಮೊ: ೯೪೪೯೪೨೩೨೬೭, ವೆಂಕಟಗಿರಿ, ಮೊ: ೯೯೦೦೧೮೮೫೩೪, ಪಿ.ಕೆ ಹರೀಶ್, ಮೊ: ೯೬೧೧೭೬೩೬೦೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ