ಭದ್ರಾವತಿ : ತಾಲೂಕಿನ ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾ ಕಾಲೋನಿ-ಬಾಬಳ್ಳಿ ನಡುವಿನ ಮಜ್ಜಿಗೆಹಳ್ಳಿ ಗ್ರಾಮದ ಗೊಂದಿ ಚಾಲನ್ ಬಳಿ ನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಬುಧವಾರ ಸಂಜೆ ಪತ್ತೆಯಾಗಿದೆ.
ಮೃತದೇಹ ಕೊಳತೆ ಸ್ಥಿತಿಯಲ್ಲಿದ್ದು, ಮೃತ ದೇಹದ ಗುರುತು ಪತ್ತೆಯಾಗಬೇಕಿದೆ. ಮಹಿಳೆಯ ವಯಸ್ಸು ೩೫ ರಿಂದ ೪೫ರ ಆಸುಪಾಸಿನಲ್ಲಿರಬಹುದೆಂದು ಅಂದಾಜಿಸಲಾಗಿದ್ದು, ಮೇಲ್ನೋಟಕ್ಕೆ ಅನುಮಾನಸ್ಪದವಾಗಿ ಮೃತಪಟ್ಟಿರುವುದು ಕಂಡು ಬರುತ್ತಿದೆ. ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಹಾಗು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ ಅನುಮಾನಸ್ಪದ ಸಾವಿನ ಪ್ರಕರಣ ಎಂದು ದಾಖಲಿಸಿಕೊಳ್ಳಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ